No menu items!
30.8 C
Munich
Sunday, June 21, 2026

ರಾಕಿಂಗ್ ಸ್ಟಾರ್ ಯಶ್ ಟಾಕ್ಸಿಕ್ ರಿಲೀಸ್ ಡೇಟ್ ಫಿಕ್ಸ್: ಹಬ್ಬಗಳ ಆರ್ಭಟದಲ್ಲಿ ಬಾಕ್ಸ್ ಆಫೀಸ್ ಬ್ಲಾಸ್ಟಿಗೆ ಸಜ್ಜು

Must read

ರಾಕಿಂಗ್ ಸ್ಟಾರ್ ಯಶ್ ಟಾಕ್ಸಿಕ್ ರಿಲೀಸ್ ಡೇಟ್ ಫಿಕ್ಸ್: ಹಬ್ಬಗಳ ಆರ್ಭಟದಲ್ಲಿ ಬಾಕ್ಸ್ ಆಫೀಸ್ ಬ್ಲಾಸ್ಟಿಗೆ ಸಜ್ಜು

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ತನ್ನ ವಿಶ್ವಾದ್ಯಂತ ಬಿಡುಗಡೆಯ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದೆ. 2026ರ ಆಗಸ್ಟ್ 26, ಬುಧವಾರ ಚಿತ್ರವು ವಿಶ್ವದಾದ್ಯಂತ ಭರ್ಜರಿಯಾಗಿ ತೆರೆಗೆ ಬರಲಿದೆ.
ಬಿಡುಗಡೆ ದಿನಾಂಕದೊಂದಿಗೆ ಚಿತ್ರತಂಡ ಹೊಸ ಪೋಸ್ಟರ್ನ್ನೂ ಅನಾವರಣಗೊಳಿಸಿದ್ದು, ಅದರಲ್ಲಿ ಯಶ್ ‘ರಾಯ’ ಮತ್ತು ‘ಟಿಕೆಟ್’ ಎಂಬ ಎರಡು ವಿಭಿನ್ನ ಪಾತ್ರಗಳ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಪೋಸ್ಟರ್ ಚಿತ್ರದ ಕರಾಳ, ಸ್ಟೈಲಿಷ್ ಹಾಗೂ ವಿಶಾಲವಾದ ಸಿನಿ ಪ್ರಪಂಚದ ಒಂದು ಝಲಕ್ ನೀಡಿದ್ದು, ಅಭಿಮಾನಿಗಳಲ್ಲಿ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.
ಚಿತ್ರವನ್ನು ಬುಧವಾರ ಬಿಡುಗಡೆ ಮಾಡುವ ಮೂಲಕ ಓಣಂ, ಈದ್, ವರಮಹಾಲಕ್ಷ್ಮಿ ಹಾಗೂ ರಕ್ಷಾಬಂಧನ ಹಬ್ಬಗಳ ಸಾಲುಸಾಲು ರಜೆಗಳ ಲಾಭ ಪಡೆಯುವ ಗುರಿಯನ್ನು ಚಿತ್ರತಂಡ ಹೊಂದಿದೆ. ದೀರ್ಘ ರಜೆಯ ಅವಧಿಯಲ್ಲಿ ದೇಶ-ವಿದೇಶಗಳಲ್ಲಿ ಉತ್ತಮ ಬಾಕ್ಸ್ ಆಫೀಸ್ ಕಲೆಕ್ಷನ್ ಮಾಡುವ ಲೆಕ್ಕಾಚಾರವೂ ಇದರ ಹಿಂದಿದೆ.
ಗೀತು ಮೋಹನ್ದಾಸ್ ನಿರ್ದೇಶನದ ಈ ಬಹುಕೋಟಿ ವೆಚ್ಚದ ಆಕ್ಷನ್ ಥ್ರಿಲ್ಲರ್ನಲ್ಲಿ ಯಶ್ ಜೊತೆಗೆ ನಯನತಾರಾ, ಕಿಯಾರಾ ಅಡ್ವಾಣಿ, ತಾರಾ ಸುತಾರಿಯಾ ಸೇರಿದಂತೆ ಹಲವು ಖ್ಯಾತ ಕಲಾವಿದರು ನಟಿಸಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಹಾಗೂ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ನಿರ್ಮಾಣದ ಈ ಚಿತ್ರವನ್ನು ಕನ್ನಡ, ಇಂಗ್ಲಿಷ್ ಸೇರಿದಂತೆ ಹಲವು ಭಾರತೀಯ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆ ಮಾಡಲಾಗುತ್ತಿದೆ.
ಭರ್ಜರಿ ತಾರಾಗಣ, ಅಂತರರಾಷ್ಟ್ರೀಯ ಮಟ್ಟದ ನಿರ್ಮಾಣ ಮೌಲ್ಯ ಹಾಗೂ ಜಾಗತಿಕ ಬಿಡುಗಡೆ ಯೋಜನೆಯೊಂದಿಗೆ ‘ಟಾಕ್ಸಿಕ್’ 2026ರ ಅತಿದೊಡ್ಡ ಚಿತ್ರಮಂದಿರದ ಹಬ್ಬಗಳಲ್ಲಿ ಒಂದಾಗುವ ನಿರೀಕ್ಷೆ ಮೂಡಿಸಿದೆ.

- Advertisement -spot_img

More articles

- Advertisement -spot_img

Latest article