No menu items!
20.1 C
Munich
Wednesday, July 1, 2026

GBA ಚುನಾವಣೆ ಮುನ್ನವೇ ಬಿಜೆಪಿ ಶಾಸಕನ ಆಪ್ತನಿಗೆ ಚಾಕು ಇರಿತ; ಐವರ ಬಂಧನ

Must read

GBA ಚುನಾವಣೆ ಮುನ್ನವೇ ಬಿಜೆಪಿ ಶಾಸಕನ ಆಪ್ತನಿಗೆ ಚಾಕು ಇರಿತ; ಐವರ ಬಂಧನ

ಬೆಂಗಳೂರು: ಜಯನಗರದಲ್ಲಿ ಬಿಜೆಪಿ ಶಾಸಕ ಸಿ.ಕೆ. ರಾಮಮೂರ್ತಿ ಅವರ ಆಪ್ತ ಹಾಗೂ ಜಿಬಿಎ ಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದ ಸೋಮಶೇಖರ್ ರೆಡ್ಡಿ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಜಯನಗರ 9ನೇ ಬ್ಲಾಕ್‌ನಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕದ ಬಳಿ ಸೋಮಶೇಖರ್ ರೆಡ್ಡಿ ಇದ್ದ ವೇಳೆ ಆಟೋದಲ್ಲಿ ಬಂದಿದ್ದ ಐವರ ತಂಡ ಕಿರಿಕ್ ತೆಗೆದಿದೆ. ಮಾತಿನ ಚಕಮಕಿ ನಡೆದ ಬಳಿಕ ಆರೋಪಿಗಳು ಚಾಕುವಿನಿಂದ ಹೊಟ್ಟೆ, ಎದೆ ಹಾಗೂ ಬೆನ್ನಿಗೆ ಇರಿದು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಗಂಭೀರವಾಗಿ ಗಾಯಗೊಂಡ ಸೋಮಶೇಖರ್ ರೆಡ್ಡಿಯನ್ನು ಸ್ಥಳೀಯರು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ರವಿ, ಬಾಲು, ಪುಲಿ, ವಿಷ್ಣು ಮತ್ತು ಶಂಕರ್ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಗಾಯಾಳುವಿನ ತಂದೆ ನೀಡಿದ ದೂರಿನ ಆಧಾರದಲ್ಲಿ, ಆರೋಪಿಗಳು ಕೊಲೆ ಮಾಡುವ ಉದ್ದೇಶದಿಂದಲೇ ಮಾರಕಾಸ್ತ್ರಗಳೊಂದಿಗೆ ಬಂದು ದಾಳಿ ನಡೆಸಿದ್ದಾರೆ ಎಂದು ಪ್ರಕರಣ ದಾಖಲಿಸಲಾಗಿದೆ.
ಬಿಜೆಪಿ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಸೋಮಶೇಖರ್ ರೆಡ್ಡಿ ಜಿಬಿಎ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧತೆ ನಡೆಸುತ್ತಿದ್ದರು ಎನ್ನಲಾಗಿದೆ. ಹೀಗಾಗಿ ದಾಳಿಯ ಹಿಂದೆ ರಾಜಕೀಯ ದ್ವೇಷದ ಹಿನ್ನೆಲೆ ಇದೆಯೇ ಎಂಬ ಅನುಮಾನವೂ ವ್ಯಕ್ತವಾಗಿದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

- Advertisement -spot_img

More articles

- Advertisement -spot_img

Latest article