No menu items!
25.3 C
Munich
Thursday, July 2, 2026

ಬಿಜೆಪಿಯಿಂದ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಸತೀಶ್ ಕಡತನಮಲೆ ಆರು ವರ್ಷಗಳ ಕಾಲ ಉಚ್ಚಾಟನೆ

Must read

ಬಿಜೆಪಿಯಿಂದ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಸತೀಶ್ ಕಡತನಮಲೆ ಆರು ವರ್ಷಗಳ ಕಾಲ ಉಚ್ಚಾಟನೆ

ಯಲಹಂಕ: ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಹಾಗೂ ಯಲಹಂಕದ ಬಿಜೆಪಿ ಮುಖಂಡ ಸತೀಶ್ ಕಡತನಮಲೆ ಅವರನ್ನು ಪಕ್ಷವು ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿದೆ.
ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವುದು ಹಾಗೂ ಪಕ್ಷದ ವಿರುದ್ಧ ಸಾರ್ವಜನಿಕವಾಗಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಇತ್ತೀಚೆಗೆ ಯಲಹಂಕದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶಾಸಕ ಎಸ್.ಆರ್. ವಿಶ್ವನಾಥ್ ಸೇರಿದಂತೆ ಕೆಲ ಬಿಜೆಪಿ ನಾಯಕರ ವಿರುದ್ಧ ಸತೀಶ್ ಕಡತನಮಲೆ ಬಹಿರಂಗವಾಗಿ ಆರೋಪಗಳನ್ನು ಮಾಡಿದ್ದರು. ಈ ಬೆಳವಣಿಗೆ ಪಕ್ಷದೊಳಗೆ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.
ಸತೀಶ್ ಕಡತನಮಲೆ ಅವರು ಸಂಸದ ಡಾ. ಕೆ. ಸುಧಾಕರ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದು, ಇತ್ತೀಚಿನ ದಿನಗಳಲ್ಲಿ ಸಂಸದ ಡಿ.ಕೆ. ಸುರೇಶ್ ಅವರೊಂದಿಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದರು.
ಈ ಎಲ್ಲ ಬೆಳವಣಿಗೆಗಳನ್ನು ಪರಿಗಣಿಸಿ, ಪಕ್ಷದ ಶಿಸ್ತು ಉಲ್ಲಂಘನೆ ಮತ್ತು ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಅವರನ್ನು ಆರು ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟಿಸಲಾಗಿದೆ.

- Advertisement -spot_img

More articles

- Advertisement -spot_img

Latest article