No menu items!
22.8 C
Munich
Friday, July 3, 2026

ಚುನಾವಣಾ ಆಯೋಗ ಮಧ್ಯಪ್ರವೇಶ ಮಾಡಿ ಕ್ರಮ ಕೈಗೊಳ್ಳಬೇಕು: SIR ನಿಲ್ಲಿಸಲು ಶೋಭಾ ಕರಂದ್ಲಾಜೆ ಆಗ್ರಹ

Must read

ಚುನಾವಣಾ ಆಯೋಗ ಮಧ್ಯಪ್ರವೇಶ ಮಾಡಿ ಕ್ರಮ ಕೈಗೊಳ್ಳಬೇಕು: SIR ನಿಲ್ಲಿಸಲು ಶೋಭಾ ಕರಂದ್ಲಾಜೆ ಆಗ್ರಹ

ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿನ 27 ವಾರ್ಡ್ಗಳಲ್ಲಿ ಕರ್ನಾಟಕ ರಾಜ್ಯ ಚುನಾವಣಾ ಆಯೋಗ ನಡೆಸುತ್ತಿರುವ ಸಮಾನಾಂತರ ಎಸ್ಐಆರ್ ಅನ್ನು ತಕ್ಷಣ ನಿಲ್ಲಿಸಬೇಕು ಎಂದು ಕೇಂದ್ರ ಸಚಿವೆ ಕು.ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.
ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಕೇಂದ್ರ ಚುನಾವಣಾ ಆಯೋಗ ರಾಜ್ಯದಾದ್ಯಂತ ಎಸ್ಐಆರ್ ನಡೆಸುತ್ತಿದೆ. ಇದರ ನಡುವೆ ಜಿಬಿಎ ವಾರ್ಡ್ಗಳಲ್ಲಿ ರಾಜ್ಯ ಚುನಾವಣಾ ಆಯೋಗ ಮತ್ತೊಂದು ಎಸ್ಐಆರ್ ನಡೆಸುತ್ತಿದೆ. ಇದು ಮತದಾರರನ್ನು ಗೊಂದಲಕ್ಕೀಡು ಮಾಡಿದೆ ಎಂದು ಹೇಳಿದರು.
ರಾಹುಲ್ ಗಾಂಧಿ ಅವರನ್ನು ತೃಪ್ತಿಪಡಿಸಲು ರಾಜ್ಯದ ಕಾಂಗ್ರೆಸ್ ಸರ್ಕಾರ ಇಂತಹ ಕೆಲಸ ಮಾಡುತ್ತಿದೆ. 20 ವರ್ಷಗಳ ನಂತರ ಈ ಎಸ್ಐಆರ್ ನಡೆಯುತ್ತಿದ್ದು, ದೇಶದಲ್ಲಿ ಅಕ್ರಮ ಮತದಾರನ್ನು ಗುರುತಿಸಲು, ಮೃತಪಟ್ಟವರ ಹೆಸರು ತೆಗೆಯಲು ಮತ್ತು ಇತರ ಹಲವಾರು ಕಾರಣಗಳಿಂದ ಎಸ್ಐಆರ್ ನಡೆಯುತ್ತಿದೆ ಎಂದರು.
ನಗರ ಪ್ರದೇಶಗಳಲ್ಲಿ ಮತದಾರರ ಹೆಸರು ಎರಡು ಕಡೆ ಇರುತ್ತದೆ. ಕೆಲವರು ಬೇರೆ ಕಡೆ ನೆಲೆಸಿರುತ್ತಾರೆ. ಹಳ್ಳಿಗೆ ಹೋಗಿರುತ್ತಾರೆ. ಆದರೆ, ಅವರ ಹೆಸರು ಮತಪಟ್ಟಿಯಲ್ಲಿ ಇರುತ್ತದೆ. ಲೆಕ್ಕಕ್ಕೆ ಇವರು ಇರುತ್ತಾರೆ. ಆದರೆ ಮತ ಚಲಾಯಿಸುವುದಿÀಲ್ಲ. ಇದರಿಂದ ಶೇಕಡಾ ಮತದಾನ ಕಡಿಮೆಯಾಗುತ್ತದೆ, ಇದನ್ನೆಲ್ಲ ತಪ್ಪಿಸಲು ಎಸ್ಐಆರ್ ನಡೆಸಲಾಗುತ್ತಿದೆ ಎಂದು ವಿವರಿಸಿದರು.
ಕರ್ನಾಟಕದಲ್ಲಿ ಅಕ್ರಮ ಮತದಾರರ ಪಟ್ಟಿಯನ್ನು ತಯಾರು ಮಾಡಲು ಸರ್ಕಾರ ಹೊರಟಿದೆ. ಸಿಎಂ ಮೂಗಿನ ನೇರದಲ್ಲಿ ಅಧಿಕಾರಿಗಳು ಅಕ್ರಮವಾಗಿ ಮತದಾರರನ್ನು ಸೇರಿಸುತ್ತಿದ್ದಾರೆ. ಹಲವಾರು ವರ್ಷಗಳಿಂದ ಅಲ್ಪಸಂಖ್ಯಾತ ನಾಯಕರು ಅಕ್ರಮವಾಗಿ ಬಾಂಗ್ಲಾದೇಶಿಗಳನ್ನು ರಾಜ್ಯಕ್ಕೆ ಕರೆತಂದಿದ್ದಾರೆ.
ಬಾಂಗ್ಲಾದೇಶಿಯರನ್ನು ಕರ್ನಾಟಕದ ವಾಸಿಗಳಾಗಿ ಮಾಡಲು ಮತ್ತು ಮತದಾರರನ್ನಾಗಿ ಮಾಡಲು ಷಡ್ಯಂತ್ರ ಮಾಡಿದ್ದಾರೆ. ರಾಜ್ಯದ ವಿವಿಧ ಭಾಗದಲ್ಲಿ ನಲೆಸಿರುವ ಅಕ್ರಮ ಬಾಂಗ್ಲಾದೇಶಿಗಳನ್ನು ಮತಪಟ್ಟಿಗೆ ಸೇರಿಸಿ ಸಕ್ರಮ ಮಾಡುತ್ತಿದ್ದೀರಿ ಎಂದು ಆರೋಪಿಸಿದರು.

- Advertisement -spot_img

More articles

- Advertisement -spot_img

Latest article