ವೃದ್ಧೆಗೂ ಇಲ್ಲ ಭದ್ರತೆ: ಮೇವು ತರಲು ಹೋದ ವೃದ್ಧೆಯ ಮೇಲೆ ಅತ್ಯಾಚಾರವೆಸಗಿ ಕೊಲೆ!
ಕೋಲಾರ: ಹಸುಗಳಿಗೆ ಮೇವು ತರಲು ಹೊಲಕ್ಕೆ ತೆರಳಿದ್ದ 70 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿ ಬಳಿಕ ಹತ್ಯೆ ಮಾಡಿರುವ ಅಮಾನವೀಯ ಘಟನೆ ಕೋಲಾರ ಜಿಲ್ಲೆಯ ವೇಮಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಚಾಕರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತ ವೃದ್ಧೆ ಎಂದಿನಂತೆ ಹಸುಗಳಿಗೆ ಮೇವು ತರಲು ಹೊಲಕ್ಕೆ ತೆರಳಿದ್ದ ವೇಳೆ ದುಷ್ಕರ್ಮಿಗಳು ಆಕೆಯ ಮೇಲೆ ಅತ್ಯಾಚಾರ ಎಸಗಿ, ಬಳಿಕ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವೇಮಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ವಿಶೇಷ ಶೋಧ ಕಾರ್ಯ ಆರಂಭಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.



