No menu items!
17.9 C
Munich
Thursday, July 9, 2026

ಯಲ್ಲಾಪುರ ಅರಬೈಲ್ ಘಾಟ್ ನಲ್ಲಿ ಭೀಕರ ಅಪಘಾತ; ಧರ್ಮಸ್ಥಳ ಪ್ರವಾಸಕ್ಕೆ ತೆರಳಿದ್ದ ಧಾರವಾಡದ ಆರು ಯುವಕರು ದುರ್ಮರಣ, ನಾಲ್ವರ ಸ್ಥಿತಿ ಗಂಭೀರ

Must read

ಯಲ್ಲಾಪುರ ಅರಬೈಲ್ ಘಾಟ್ ನಲ್ಲಿ ಭೀಕರ ಅಪಘಾತ; ಧರ್ಮಸ್ಥಳ ಪ್ರವಾಸಕ್ಕೆ ತೆರಳಿದ್ದ ಧಾರವಾಡದ ಆರು ಯುವಕರು ದುರ್ಮರಣ, ನಾಲ್ವರ ಸ್ಥಿತಿ ಗಂಭೀರ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್ನ ಬಳಗಾರ್ ಸಮೀಪ ಗುರುವಾರ (ಜುಲೈ 9) ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರವಾಸಕ್ಕೆ ತೆರಳಿದ್ದ ತೂಫಾನ್ ಕ್ರೂಸರ್ ಹಾಗೂ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಿಂದ ಈ ದುರ್ಘಟನೆ ನಡೆದಿದೆ.
ಅಪಘಾತಕ್ಕೀಡಾದ ತೂಫಾನ್ ಕ್ರೂಸರ್ (KA-19 AA-5920) ವಾಹನದಲ್ಲಿ ಚಾಲಕ ಸೇರಿದಂತೆ ಒಟ್ಟು 10 ಮಂದಿ ಪ್ರಯಾಣಿಸುತ್ತಿದ್ದರು. ಇವರೆಲ್ಲರೂ ಧಾರವಾಡ ಮೂಲದವರಾಗಿದ್ದು, ಸ್ವಿಗ್ಗಿ ಸಂಸ್ಥೆಯಲ್ಲಿ ಪಾರ್ಟ್ಟೈಮ್ ಡೆಲಿವರಿ ಬಾಯ್ಸ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಬುಧವಾರ ರಾತ್ರಿ ಧರ್ಮಸ್ಥಳ ಹಾಗೂ ಚಿಕ್ಕಮಗಳೂರಿಗೆ ಪ್ರವಾಸ ಕೈಗೊಂಡಿದ್ದ ವೇಳೆ ಅರಬೈಲ್ ಘಾಟ್ನ ಬಳಗಾರ್ ಸಮೀಪ ಎದುರಿನಿಂದ ಬಂದ ಲಾರಿ (KA-22 AA-1008)ಗೆ ಕ್ರೂಸರ್ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ತೀವ್ರತೆಗೆ ತೂಫಾನ್ ಕ್ರೂಸರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಆರು ಮಂದಿ ಮೃತಪಟ್ಟಿದ್ದಾರೆ. ಮೃತರನ್ನು ಬಸವರಾಜ್ (48), ಅಭಿಷೇಕ್ ಈಶ್ವರ್ (28), ಅಕ್ಷಯ್ (26), ಅಭಿಷೇಕ್ (26), ಸಂಜೀವ್ (ಸಂಜಯ್) ಅಂಗಡಿ ಎಂದು ಗುರುತಿಸಲಾಗಿದೆ. ಮತ್ತೋರ್ವರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಲ್ಲಿ ಶಿವರಾಜ್ ದುರ್ಗಪ್ಪ ಮಡಿವಾಳ್ (22), ಮಂಜುನಾಥ್ ಅಶೋಕ್ ಚುಲಕಿ (32), ಸಚಿನ್ ಹಾಗೂ ಚೆನ್ನಬಸಯ್ಯ ಬಸಲಿಂಗಯ್ಯ ಸಂಪಗಾವ್ (28) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ನಾಲ್ವರೂ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಯಲ್ಲಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ನಿಖರ ಕಾರಣವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈ ದುರ್ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಧಾರವಾಡದಲ್ಲಿರುವ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಪ್ರವಾಸದ ಸಂಭ್ರಮ ಕ್ಷಣಾರ್ಧದಲ್ಲೇ ಶೋಕವಾಗಿ ಮಾರ್ಪಟ್ಟಿದೆ.

- Advertisement -spot_img

More articles

- Advertisement -spot_img

Latest article