No menu items!
18.6 C
Munich
Thursday, July 16, 2026

ಗ್ರಾಹಕರ ಜೇಬಿಗೆ ಮತ್ತಷ್ಟು ಹೊರೆ: ವಾರದೊಳಗೆ ಚಿಕನ್-ಮೊಟ್ಟೆ ದರದಲ್ಲಿ ಭಾರೀ ಏರಿಕೆ!

Must read

ಗ್ರಾಹಕರ ಜೇಬಿಗೆ ಮತ್ತಷ್ಟು ಹೊರೆ: ವಾರದೊಳಗೆ ಚಿಕನ್-ಮೊಟ್ಟೆ ದರದಲ್ಲಿ ಭಾರೀ ಏರಿಕೆ!

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿಕನ್ ಹಾಗೂ ಮೊಟ್ಟೆ ಬೆಲೆಗಳು ಕಳೆದ ಒಂದು ವಾರದಿಂದ ನಿರಂತರವಾಗಿ ಏರಿಕೆಯಾಗುತ್ತಿದ್ದು, ಇದೀಗ ದಾಖಲೆಯ ಮಟ್ಟ ತಲುಪಿವೆ. ಬಾಯ್ಲರ್ ಚಿಕನ್ ಒಂದು ಕೆಜಿಗೆ 360 ರೂಪಾಯಿ ಹಾಗೂ ಒಂದು ಮೊಟ್ಟೆಯ ಚಿಲ್ಲರೆ ದರ 9 ರೂಪಾಯಿಗೆ ಏರಿಕೆಯಾಗಿರುವುದು ಗ್ರಾಹಕರಿಗೆ ಬೆಲೆ ಏರಿಕೆಯ ಶಾಕ್ ನೀಡಿದೆ.
ಮಾರುಕಟ್ಟೆಯ ಮಾಹಿತಿ ಪ್ರಕಾರ, ಚರ್ಮವಿಲ್ಲದ ಬಾಯ್ಲರ್ ಚಿಕನ್ ಪ್ರತಿ ಕೆಜಿಗೆ 360 ರೂಪಾಯಿಗೆ ಹಾಗೂ ಚರ್ಮ ಸಮೇತ ಬಾಯ್ಲರ್ ಚಿಕನ್ ಪ್ರತಿ ಕೆಜಿಗೆ 340 ರೂಪಾಯಿಗೆ ಮಾರಾಟವಾಗುತ್ತಿದೆ. ಕೆಲವೇ ದಿನಗಳ ಹಿಂದೆ 300 ರೂಪಾಯಿ ಆಸುಪಾಸಿನಲ್ಲಿದ್ದ ಚಿಕನ್ ದರ ಈಗ 350ರಿಂದ 360 ರೂಪಾಯಿವರೆಗೆ ಏರಿಕೆಯಾಗಿದ್ದು, ಮಾಂಸಾಹಾರ ಪ್ರಿಯರ ಖರ್ಚು ಹೆಚ್ಚಾಗಿದೆ.
ಇನ್ನೊಂದೆಡೆ ಮೊಟ್ಟೆ ದರವೂ ಗಣನೀಯವಾಗಿ ಏರಿಕೆಯಾಗಿದೆ. ಸಗಟು ಮಾರುಕಟ್ಟೆಯಲ್ಲಿ ಒಂದು ಮೊಟ್ಟೆ 8 ರೂಪಾಯಿಗೆ ಮಾರಾಟವಾಗುತ್ತಿದ್ದರೆ, ಚಿಲ್ಲರೆ ಮಾರುಕಟ್ಟೆಯಲ್ಲಿ 8.30ರಿಂದ 9 ರೂಪಾಯಿವರೆಗೆ ಮಾರಾಟವಾಗುತ್ತಿದೆ. ಕೇವಲ ಮೂರು ದಿನಗಳ ಹಿಂದಷ್ಟೇ 7ರಿಂದ 7.50 ರೂಪಾಯಿ ಇದ್ದ ಮೊಟ್ಟೆಯ ಬೆಲೆ ಇದೀಗ 9 ರೂಪಾಯಿಗೆ ತಲುಪಿದ್ದು, ಗ್ರಾಹಕರಿಗೆ ಹೆಚ್ಚುವರಿ ಹೊರೆ ತಂದಿದೆ.
ಚಿಕನ್ ಹಾಗೂ ಮೊಟ್ಟೆ ದರದಲ್ಲಿ ಒಂದೇ ವಾರದಲ್ಲಿ ಕಂಡುಬಂದಿರುವ ಈ ಏರಿಕೆಯಿಂದ ಮನೆ ಬಳಕೆದಾರರು, ಹೋಟೆಲ್ಗಳು ಹಾಗೂ ಆಹಾರ ಉದ್ಯಮದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಬೆಲೆ ಏರಿಕೆಯಿಂದ ಗ್ರಾಹಕರು ತಮ್ಮ ದಿನನಿತ್ಯದ ಆಹಾರ ವೆಚ್ಚವನ್ನು ಮರುಪರಿಶೀಲಿಸುವಂತಾಗಿದೆ.

- Advertisement -spot_img

More articles

- Advertisement -spot_img

Latest article