No menu items!
21.5 C
Munich
Monday, September 14, 2026

ಸೋಷಿಯಲ್ ಮೀಡಿಯಾ ಇನ್ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR..! ಯಾಕೆ ಗೊತ್ತಾ..?

Must read

ಸೋಷಿಯಲ್ ಮೀಡಿಯಾ ಇನ್ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR..! ಯಾಕೆ ಗೊತ್ತಾ..?

ಬೆಂಗಳೂರು: ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿ, ಪಬ್ ಮ್ಯಾನೇಜರ್ಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಸೋಷಿಯಲ್ ಮೀಡಿಯಾ ಇನ್ಫ್ಲೂಯೆನ್ಸರ್ ಮಂಜು ಅಲಿಯಾಸ್ ‘ಅಮುಕು ಡುಮುಕು’ ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಜುಲೈ 9ರಂದು ರಾತ್ರಿ ಮಂಜು ತನ್ನ ಸ್ನೇಹಿತರೊಂದಿಗೆ ನಗರದ ರೆಸ್ಟೋ ಬಾರ್ಗೆ ತೆರಳಿ ಊಟ ಹಾಗೂ ಮದ್ಯ ಸೇವಿಸಿದ್ದರು. ಬಳಿಕ ಬಿಲ್ ನೀಡುವಂತೆ ಕೇಳಿದ ಮಹಿಳಾ ಸಿಬ್ಬಂದಿಯೊಂದಿಗೆ ಅವರು ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಇದಾದ ನಂತರ ಸ್ಥಳದಿಂದ ಹೊರಡುತ್ತಿದ್ದ ವೇಳೆ ಮಹಿಳಾ ಸಿಬ್ಬಂದಿ ಪ್ರಶ್ನೆ ಮಾಡಿದಾಗ, ಅವರಿಗೆ ಸೆಲ್ಫಿ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಸ್ಥಳದಲ್ಲಿದ್ದ ಪಬ್ ಮ್ಯಾನೇಜರ್ ಮಧ್ಯಪ್ರವೇಶಿಸಿದಾಗ, ಅವರ ಮೇಲೂ ಹಲ್ಲೆಗೆ ಯತ್ನಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಘಟನೆ ಸಂಬಂಧ ಮಂಜು ಅಲಿಯಾಸ್ ಅಮುಕು ಡುಮುಕು ಹಾಗೂ ಅವರ ಸ್ನೇಹಿತರ ವಿರುದ್ಧ ಪ್ರಕರಣ ದಾಖಲಿಸಿರುವ ಅನ್ನಪೂರ್ಣೇಶ್ವರಿ ನಗರ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿದ್ದಾರೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

- Advertisement -spot_img

More articles

- Advertisement -spot_img

Latest article