No menu items!
26.5 C
Munich
Thursday, July 16, 2026

ಮನೆ ಮುಂದೆ ಆಟವಾಡುತ್ತಿದ್ದ ಕಂದಮ್ಮನ ಮೇಲೆ ಬೀದಿ ನಾಯಿಗಳ ದಾಳಿ: ಒಂದೂವರೆ ವರ್ಷದ ಮಗು ಸಾವು

Must read

ಮನೆ ಮುಂದೆ ಆಟವಾಡುತ್ತಿದ್ದ ಕಂದಮ್ಮನ ಮೇಲೆ ಬೀದಿ ನಾಯಿಗಳ ದಾಳಿ: ಒಂದೂವರೆ ವರ್ಷದ ಮಗು ಸಾವು

ರಾಯಚೂರು: ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕೆ. ಹಂಚಿಕಾಳ ಕ್ಯಾಂಪಿನಲ್ಲಿ ಬೀದಿನಾಯಿಗಳ ದಾಳಿಗೆ ತುತ್ತಾಗಿ ಗಂಭೀರವಾಗಿ ಗಾಯಗೊಂಡಿದ್ದ 18 ತಿಂಗಳ ಪುಟ್ಟ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ.
ಮೃತ ಬಾಲಕಿಯನ್ನು ಅನಂ (18 ತಿಂಗಳು) ಎಂದು ಗುರುತಿಸಲಾಗಿದೆ. ನಿದ್ದೆಯಿಂದ ಎದ್ದ ಬಳಿಕ ಮನೆ ಮುಂದೆ ಆಟವಾಡುತ್ತಿದ್ದ ವೇಳೆ, ಏಕಾಏಕಿ ಆರೇಳು ಬೀದಿನಾಯಿಗಳು ಮಗುವಿನ ಮೇಲೆ ದಾಳಿ ನಡೆಸಿವೆ. ನಾಯಿಗಳು ಮಗುವನ್ನು ಎಳೆದಾಡಿ ದೇಹದ ಹಲವು ಭಾಗಗಳಲ್ಲಿ ಕಚ್ಚಿ ಗಂಭೀರವಾಗಿ ಗಾಯಗೊಳಿಸಿವೆ.
ಘಟನೆ ಗಮನಿಸಿದ ಕುಟುಂಬಸ್ಥರು ಹಾಗೂ ಸ್ಥಳೀಯರು ತಕ್ಷಣವೇ ಮಗುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಆದರೆ ಗಂಭೀರ ಗಾಯಗಳಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ.
ಈ ಸಂಬಂಧ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಬೀದಿನಾಯಿಗಳ ಹಾವಳಿಗೆ ಕೂಡಲೇ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಗ್ರಾಮಸ್ಥರು ಸ್ಥಳೀಯ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮಗಳಲ್ಲಿ ಹೆಚ್ಚುತ್ತಿರುವ ಬೀದಿನಾಯಿಗಳ ದಾಳಿಯಿಂದ ಮಕ್ಕಳ ಸುರಕ್ಷತೆ ಪ್ರಶ್ನಾರ್ಹವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯವೂ ಕೇಳಿಬಂದಿದೆ.

- Advertisement -spot_img

More articles

- Advertisement -spot_img

Latest article