No menu items!
30.2 C
Munich
Thursday, July 16, 2026

ಸಚಿವ ಸಂಪುಟ ವಿಸ್ತರಣೆಗೆ ತಾತ್ಕಾಲಿಕ ಬ್ರೇಕ್: ಹೈಕಮಾಂಡ್ ಸಭೆ ಮುಂದೂಡಿಕೆ ಎಂದ ಬಿ.ಕೆ. ಹರಿಪ್ರಸಾದ್

Must read

ಸಚಿವ ಸಂಪುಟ ವಿಸ್ತರಣೆಗೆ ತಾತ್ಕಾಲಿಕ ಬ್ರೇಕ್: ಹೈಕಮಾಂಡ್ ಸಭೆ ಮುಂದೂಡಿಕೆ ಎಂದ ಬಿ.ಕೆ. ಹರಿಪ್ರಸಾದ್

ನವದೆಹಲಿ/ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತಿಳಿಸಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ನಡೆದ ಸಭೆಯಲ್ಲಿ ಸಚಿವ ಸಂಪುಟ ವಿಸ್ತರಣೆ, ಪಕ್ಷ ಸಂಘಟನೆ ಹಾಗೂ ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆದರೂ, ಅಂತಿಮ ತೀರ್ಮಾನ ಕೈಗೊಳ್ಳಲಾಗಿಲ್ಲ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು. ಸಭೆಯ ಬಳಿಕ ಮಾತನಾಡಿದ ಹರಿಪ್ರಸಾದ್, ಸಚಿವ ಸಂಪುಟ ವಿಸ್ತರಣೆ ಕುರಿತ ನಿರ್ಧಾರವನ್ನು ಸದ್ಯಕ್ಕೆ ಒಂದೆರಡು ದಿನಗಳ ಕಾಲ ಮುಂದೂಡಲಾಗಿದೆ ಎಂದು ಸ್ಪಷ್ಟಪಡಿಸಿದರು.
ಪಕ್ಷದ ಹೈಕಮಾಂಡ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಈ ಕುರಿತು ಚರ್ಚೆ ನಡೆಸಲಾಗಿದೆ. ಮುಂದಿನ ಸಭೆಯ ದಿನಾಂಕವನ್ನು ಹೈಕಮಾಂಡ್ ನಿಗದಿಪಡಿಸಲಿದ್ದು, ಬಳಿಕ ಮತ್ತೊಮ್ಮೆ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿಗೆ ಮರಳಿರುವುದರಿಂದ ಚರ್ಚೆ ಪೂರ್ಣಗೊಳ್ಳಲಿಲ್ಲ. ಅವರು ಮತ್ತೆ ದೆಹಲಿಗೆ ತೆರಳಿದ ಬಳಿಕ ಈ ವಿಚಾರವನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ ಎಂದು ಹರಿಪ್ರಸಾದ್ ತಿಳಿಸಿದರು.
ಸಚಿವ ಸಂಪುಟ ವಿಸ್ತರಣೆಯ ನಿರೀಕ್ಷೆಯಲ್ಲಿ 40ಕ್ಕೂ ಹೆಚ್ಚು ಸಚಿವಾಕಾಂಕ್ಷಿಗಳು ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರ ಬಳಿ ಲಾಬಿ ನಡೆಸಿದ್ದಾರೆ. ಆದರೆ ಚರ್ಚೆ ಮುಂದೂಡಿಕೆಯಾಗಿರುವುದರಿಂದ ಅವರ ನಿರೀಕ್ಷೆಗೆ ಸದ್ಯ ತಣ್ಣೀರು ಬಿದ್ದಂತಾಗಿದೆ.
ಇದೇ ವೇಳೆ, ರಾಹುಲ್ ಗಾಂಧಿ ಡೆಹ್ರಾಡೂನ್ನಲ್ಲಿ ನಡೆಯಲಿರುವ ನೀಟ್ ಪರೀಕ್ಷೆಯ ಅಕ್ರಮಗಳ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಹೈಕಮಾಂಡ್ ನಾಯಕರ ಕಾರ್ಯಕ್ರಮದಲ್ಲೂ ಬದಲಾವಣೆ ಆಗಿದೆ ಎನ್ನಲಾಗಿದೆ.

- Advertisement -spot_img

More articles

- Advertisement -spot_img

Latest article