No menu items!
24.9 C
Munich
Saturday, July 18, 2026

ಚಾಮುಂಡಿ ಬೆಟ್ಟಕ್ಕೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ: ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ

Must read

ಚಾಮುಂಡಿ ಬೆಟ್ಟಕ್ಕೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ: ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ

ಮೈಸೂರು: ಆಷಾಢ ಮಾಸದ ಮೊದಲ ಶುಕ್ರವಾರದ ಅಂಗವಾಗಿ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ನಾಡದೇವಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಮುಂಜಾನೆಯಿಂದಲೇ ಚಾಮುಂಡಿ ಬೆಟ್ಟದಲ್ಲಿ ಭಕ್ತರ ಸಂಚಾರ ಹೆಚ್ಚಾಗಿದ್ದು, ವಿಜಯಲಕ್ಷ್ಮಿ ದೇವಿಯ ಸನ್ನಿಧಿಯಲ್ಲಿ ಕುಟುಂಬದ ಕ್ಷೇಮಕ್ಕಾಗಿ ಪ್ರಾರ್ಥನೆ ಸಲ್ಲಿಸಿದರೆಂದು ತಿಳಿದುಬಂದಿದೆ.
ಇದೇ ವೇಳೆ, ಚಾಮುಂಡಿ ಬೆಟ್ಟವನ್ನು ವಿವಿಧ ಬಗೆಯ ಹೂಗಳಿಂದ ವಿಶೇಷವಾಗಿ ಅಲಂಕರಿಸಲಾಗಿದ್ದು, ತಾಯಿ ಚಾಮುಂಡೇಶ್ವರಿ ನಾಗಲಕ್ಷ್ಮೀ ಅಲಂಕಾರದಲ್ಲಿ ಭಕ್ತರಿಗೆ ದರ್ಶನ ನೀಡುತ್ತಿದ್ದಾರೆ. ಉತ್ಸವ ಮೂರ್ತಿಗೂ ವಿಶೇಷ ಅಲಂಕಾರ ಮಾಡಲಾಗಿದ್ದು, ಮುಂಜಾನೆಯಿಂದಲೇ ಅಭಿಷೇಕ, ಕುಂಕುಮಾರ್ಚನೆ ಹಾಗೂ ಮಹಾಮಂಗಳಾರತಿ ಸೇರಿದಂತೆ ವಿಶೇಷ ಪೂಜಾ ಕೈಂಕರ್ಯಗಳು ನಡೆದವು.
ದೇವಿಯ ದರ್ಶನಕ್ಕಾಗಿ ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸಿದ್ದು, ಈ ಬಾರಿ ₹2,000 ವಿಶೇಷ ಪ್ರವೇಶ ಟಿಕೆಟ್ ಪಡೆದ ಭಕ್ತರಿಗೆ ನೇರ ದರ್ಶನದ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಳಗ್ಗೆ 5.30ರಿಂದ 10 ಗಂಟೆಯವರೆಗೆ ವಿವಿಐಪಿ ದರ್ಶನಕ್ಕೂ ಅವಕಾಶ ನೀಡಲಾಗಿದೆ.
ಇನ್ನೊಂದೆಡೆ, ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ವಿಜಯಲಕ್ಷ್ಮಿ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿರುವುದು ಗಮನ ಸೆಳೆದಿದೆ.

- Advertisement -spot_img

More articles

- Advertisement -spot_img

Latest article