No menu items!
24.9 C
Munich
Saturday, July 18, 2026

ಬೆಂಗಳೂರಿನಲ್ಲಿ 2 ವರ್ಷದ ಹೆಣ್ಣುಮಗುವಿನ ಅನುಮಾನಾಸ್ಪದ ಸಾವು: ಲಿವ್-ಇನ್ ದಂಪತಿ ವಿರುದ್ಧ ತನಿಖೆ ಆರಂಭ

Must read

ಬೆಂಗಳೂರಿನಲ್ಲಿ 2 ವರ್ಷದ ಹೆಣ್ಣುಮಗುವಿನ ಅನುಮಾನಾಸ್ಪದ ಸಾವು: ಲಿವ್-ಇನ್ ದಂಪತಿ ವಿರುದ್ಧ ತನಿಖೆ ಆರಂಭ

ಬೆಂಗಳೂರು: ನಗರದ ಬಾಣಸವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಇಂದಿರಾ ಸ್ಟ್ರೀಟ್ನಲ್ಲಿ ಎರಡು ವರ್ಷದ ಹೆಣ್ಣುಮಗು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಉಸಿರಾಟದ ಸಮಸ್ಯೆಯಿಂದ ಮಗು ಮೃತಪಟ್ಟಿದೆ ಎಂದು ಪೋಷಕರು ಹೇಳಿದ್ದರೂ, ಪ್ರಕರಣದಲ್ಲಿ ಅನುಮಾನಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಜೇಸನ್ ಆಂಥೋನಿ ಮತ್ತು ರೋಸ್ಲಿನ್ ಹಲವು ವರ್ಷಗಳಿಂದ ಲಿವ್-ಇನ್ ಸಂಬಂಧದಲ್ಲಿ ವಾಸವಾಗಿದ್ದು, ಅವರಿಗೆ ಎರಡು ವರ್ಷದ ಹೆಣ್ಣುಮಗು ಇತ್ತು. ಎರಡು ದಿನಗಳ ಹಿಂದೆ ಮಗುವಿಗೆ ಏಕಾಏಕಿ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮಗು ಮೃತಪಟ್ಟಿದೆ ಎಂದು ಪೋಷಕರು ತಿಳಿಸಿದ್ದಾರೆ.
ಘಟನೆಯ ಮಾಹಿತಿ ದೊರೆತ ತಕ್ಷಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಾಥಮಿಕ ಪರಿಶೀಲನೆ ನಡೆಸಿದ್ದರು. ಬಳಿಕ ದಂಪತಿಯ ಸ್ನೇಹಿತೆಯೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿ, ಮಗುವಿನ ತಾಯಿ ಆಗಾಗ ಮಗುವಿಗೆ ಹಲ್ಲೆ ನಡೆಸುತ್ತಿದ್ದಳು, ಅದನ್ನು ತಾನು ಹಲವು ಬಾರಿ ನೋಡಿದ್ದೇನೆ ಎಂದು ಆರೋಪಿಸಿದ್ದಾರೆ.
ಇದೇ ವೇಳೆ, ಮಗುವಿನ ದೇಹದ ಮೇಲೆ ಗಾಯದ ಗುರುತುಗಳು ಕಂಡುಬಂದಿರುವುದರಿಂದ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಬಾಣಸವಾಡಿ ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪೋಸ್ಟ್ಮಾರ್ಟಂ ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ಬಹಿರಂಗವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತನಿಖೆಯ ವರದಿ ಆಧರಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

- Advertisement -spot_img

More articles

- Advertisement -spot_img

Latest article