No menu items!
25.8 C
Munich
Saturday, July 18, 2026

ಬಿಡದಿ ಟೌನ್ಶಿಪ್ ಯೋಜನೆ: ಹೆಚ್.ಡಿ. ಕುಮಾರಸ್ವಾಮಿ ಕುಟುಂಬದ 35 ಎಕರೆ ಭೂಮಿಗೂ ಅಂತಿಮ ಅಧಿಸೂಚನೆ

Must read

ಬಿಡದಿ ಟೌನ್ಶಿಪ್ ಯೋಜನೆ: ಹೆಚ್.ಡಿ. ಕುಮಾರಸ್ವಾಮಿ ಕುಟುಂಬದ 35 ಎಕರೆ ಭೂಮಿಗೂ ಅಂತಿಮ ಅಧಿಸೂಚನೆ

ರಾಮನಗರ: ಬಿಡದಿ ಟೌನ್ಶಿಪ್ ಯೋಜನೆಗೆ ಸಂಬಂಧಿಸಿದ ಭೂಸ್ವಾಧೀನ ಪ್ರಕ್ರಿಯೆ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದ್ದು, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಕುಟುಂಬಕ್ಕೆ ಸೇರಿದ ಭೂಮಿಯೂ ಅಂತಿಮ ಅಧಿಸೂಚನೆ ವ್ಯಾಪ್ತಿಗೆ ಒಳಪಟ್ಟಿರುವುದು ಬೆಳಕಿಗೆ ಬಂದಿದೆ.
ಮಾಹಿತಿಯ ಪ್ರಕಾರ, ಬಿಡದಿ ಹೋಬಳಿಯ ಹೊಸೂರು ಹಾಗೂ ಬನ್ನಿಗಿರಿ ಗ್ರಾಮಗಳ ಸರ್ವೇ ನಂಬರ್ಗಳಲ್ಲಿ ಇರುವ ಕುಮಾರಸ್ವಾಮಿ ಕುಟುಂಬದ ಒಟ್ಟು 35 ಎಕರೆ ಜಮೀನು ಭೂಸ್ವಾಧೀನ ಪ್ರಕ್ರಿಯೆಗೆ ಒಳಪಟ್ಟಿದೆ. ಇದರಲ್ಲಿ ಅನಿತಾ ಕುಮಾರಸ್ವಾಮಿ ಅವರ ಹೆಸರಿನಲ್ಲಿರುವ ಸುಮಾರು 31 ಎಕರೆ ಹಾಗೂ ನಿಖಿಲ್ ಕುಮಾರಸ್ವಾಮಿ ಅವರ ಹೆಸರಿನಲ್ಲಿರುವ 4 ಎಕರೆ ಜಮೀನಿಗೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ.
ಈ ಬೆಳವಣಿಗೆಯ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಸಂಬಂಧಿತ ಭೂ ದಾಖಲೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪ್ರಸ್ತುತ ಬಿಡದಿ ಟೌನ್ಶಿಪ್ ಯೋಜನೆಯನ್ನು ಜೆಡಿಎಸ್ ತೀವ್ರವಾಗಿ ವಿರೋಧಿಸುತ್ತಿದ್ದು, ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಆದರೆ, ಕಾಂಗ್ರೆಸ್ ಈ ನಿಲುವನ್ನು ಪ್ರಶ್ನಿಸಿದ್ದು, ಕುಮಾರಸ್ವಾಮಿ ಕುಟುಂಬದ ಭೂಮಿಯೂ ಯೋಜನೆ ವ್ಯಾಪ್ತಿಗೆ ಬಂದಿರುವ ಕಾರಣದಿಂದಲೇ ಜೆಡಿಎಸ್ ಈ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಆರೋಪಿಸಿದೆ.
“ರೈತರ ಹಿತಾಸಕ್ತಿಗಿಂತ ತಮ್ಮ ಕುಟುಂಬದ 35 ಎಕರೆ ಭೂಮಿಯನ್ನು ಉಳಿಸಿಕೊಳ್ಳುವುದೇ ಜೆಡಿಎಸ್ನ ಉದ್ದೇಶ” ಎಂದು ಕಾಂಗ್ರೆಸ್ ಟೀಕಿಸಿದ್ದು, ಬಡ ರೈತರ ಪರವಾಗಿ ಅಲ್ಲ, ವೈಯಕ್ತಿಕ ಹಿತಾಸಕ್ತಿಯಿಂದಲೇ ಯೋಜನೆಗೆ ವಿರೋಧ ವ್ಯಕ್ತವಾಗುತ್ತಿದೆ ಎಂದು ಆರೋಪಿಸಿದೆ.
ಇನ್ನೊಂದೆಡೆ, ಬಿಡದಿ ಟೌನ್ಶಿಪ್ ಯೋಜನೆಗೆ ಸಂಬಂಧಿಸಿದ ಭೂಸ್ವಾಧೀನ ಪ್ರಕ್ರಿಯೆ ಹಾಗೂ ರೈತರ ಪ್ರತಿಭಟನೆ ಮುಂದುವರಿದಿದ್ದು, ಈ ವಿಚಾರ ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

- Advertisement -spot_img

More articles

- Advertisement -spot_img

Latest article