No menu items!
17.7 C
Munich
Wednesday, July 22, 2026

RSS ವಿರುದ್ಧದ ಪೋಸ್ಟ್ ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ, ಮೊಹಮ್ಮದ್ ನಲಪಾಡ್ʼಗೆ ಮತ್ತೆ ಸಮನ್ಸ್ ಜಾರಿ

Must read

RSS ವಿರುದ್ಧದ ಪೋಸ್ಟ್ ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ, ಮೊಹಮ್ಮದ್ ನಲಪಾಡ್ʼಗೆ ಮತ್ತೆ ಸಮನ್ಸ್ ಜಾರಿ

ಬೆಂಗಳೂರು: ಆರ್ಎಸ್ಎಸ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಅವರಿಗೆ ಬೆಂಗಳೂರಿನ 42ನೇ ಎಸಿಜೆಎಂ (ACJM) ನ್ಯಾಯಾಲಯ ಮತ್ತೊಮ್ಮೆ ಸಮನ್ಸ್ ಜಾರಿ ಮಾಡಿದೆ.
ಬೆಂಗಳೂರಿನ ಸಿದ್ದಾಪುರ ನಿವಾಸಿ ಎ. ತೇಜಸ್ ಗೌಡ ಸಲ್ಲಿಸಿದ್ದ ಖಾಸಗಿ ದೂರಿನ ಮೇರೆಗೆ ವಿಚಾರಣೆ ನಡೆಸಿದ ನ್ಯಾಯಾಲಯ, ಸಚಿವ ಪ್ರಿಯಾಂಕ್ ಖರ್ಗೆ (ಎ1) ಹಾಗೂ ಮೊಹಮ್ಮದ್ ನಲಪಾಡ್ (ಎ3) ಅವರು ಆಗಸ್ಟ್ 1ರಂದು ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆಯೂ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ಆದರೆ, ಆ ಸಮನ್ಸ್ ಜಾರಿಗೊಳಿಸುವಲ್ಲಿ ಪೊಲೀಸರು ವಿಫಲರಾಗಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯ ಮತ್ತೊಮ್ಮೆ ಸಮನ್ಸ್ ನೀಡಿದ್ದು, ಹಾಜರಾತಿಗೆ ಸ್ಪಷ್ಟ ಸೂಚನೆ ನೀಡಿದೆ.
ನ್ಯಾಯಾಧೀಶ ಸಂದೀಪ್ ಪಾಟೀಲ್ ಅವರು ಈ ಸಂಬಂಧ ಆದೇಶ ಹೊರಡಿಸಿದ್ದು, ನಿಗದಿತ ದಿನಾಂಕದಂದು ಇಬ್ಬರೂ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ತಿಳಿಸಿದ್ದಾರೆ.
ಪ್ರಕರಣದ ಹಿನ್ನೆಲೆ
2025ರ ಅಕ್ಟೋಬರ್ 14ರಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ಆರ್ಎಸ್ಎಸ್ ಸದಸ್ಯರ ವಿರುದ್ಧ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಇದೇ ವೇಳೆ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಅವರು ಯೂಟ್ಯೂಬ್ ವಾಹಿನಿಯೊಂದರಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು ಎನ್ನಲಾಗಿದೆ.
ಈ ಪೋಸ್ಟ್ಗಳು ಮತ್ತು ಹೇಳಿಕೆಗಳು ಸಂಘದ ಘನತೆಗೆ ಧಕ್ಕೆ ತಂದಿವೆ ಎಂದು ಆರೋಪಿಸಿ ಎ. ತೇಜಸ್ ಗೌಡ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.
ದೂರನ್ನು ಪರಿಗಣಿಸಿರುವ ನ್ಯಾಯಾಲಯ, ಪ್ರಕರಣದ ಮುಂದಿನ ವಿಚಾರಣೆಗೆ ಇಬ್ಬರೂ ಖುದ್ದಾಗಿ ಹಾಜರಾಗುವಂತೆ ಆಗಸ್ಟ್ 1ರಂದು ಗಡುವು ನೀಡಿದೆ.

- Advertisement -spot_img

More articles

- Advertisement -spot_img

Latest article