No menu items!
16.8 C
Munich
Thursday, July 23, 2026

ಬೊಮ್ಮಸಂದ್ರ ಪಿಜಿಯಲ್ಲಿ ಭೀಕರ ಸಿಲಿಂಡರ್ ಸ್ಫೋಟ; 10ಕ್ಕೂ ಹೆಚ್ಚು ಕಾರ್ಮಿಕರಿಗೆ ಗಂಭೀರ ಗಾಯ

Must read

ಬೊಮ್ಮಸಂದ್ರ ಪಿಜಿಯಲ್ಲಿ ಭೀಕರ ಸಿಲಿಂಡರ್ ಸ್ಫೋಟ; 10ಕ್ಕೂ ಹೆಚ್ಚು ಕಾರ್ಮಿಕರಿಗೆ ಗಂಭೀರ ಗಾಯ

ಬೆಂಗಳೂರು: ನಗರದ ಹೊರವಲಯದ ಬೊಮ್ಮಸಂದ್ರದಲ್ಲಿರುವ ಪೇಯಿಂಗ್ ಗೇಸ್ಟ್ (ಪಿಜಿ) ಕಟ್ಟಡದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ಮುಂಜಾನೆ ನಡೆದಿದೆ.
ಇಂದು ಬೆಳಗ್ಗೆ ಸುಮಾರು 6 ಗಂಟೆ ವೇಳೆಗೆ ಈ ದುರ್ಘಟನೆ ಸಂಭವಿಸಿದೆ. ಬೊಮ್ಮಸಂದ್ರದ ನಾಗರಾಜ್ ರೆಡ್ಡಿ ಅವರಿಗೆ ಸೇರಿದ ಪಿಜಿ ಕಟ್ಟಡವನ್ನು ಲಿಂಗರಾಜು ಅವರಿಗೆ ಲೀಸ್ಗೆ ನೀಡಲಾಗಿತ್ತು. 18 ಕೊಠಡಿಗಳಿರುವ ಈ ಕಟ್ಟಡದಲ್ಲಿ ಉತ್ತರ ಭಾರತದ ಕಾರ್ಮಿಕರು ಸೇರಿದಂತೆ 10ಕ್ಕೂ ಹೆಚ್ಚು ಅನ್ಯರಾಜ್ಯದವರು ವಾಸಿಸುತ್ತಿದ್ದರು.
ಪ್ರಾಥಮಿಕ ಮಾಹಿತಿಯ ಪ್ರಕಾರ, ಮುಂಜಾನೆ ನಿವಾಸಿಗಳು ಎದ್ದು ಕೊಠಡಿಯ ಲೈಟ್ ಆನ್ ಮಾಡುತ್ತಿದ್ದಂತೆ ಗ್ಯಾಸ್ ಸೋರಿಕೆಯಿಂದ ಭಾರೀ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಕಟ್ಟಡದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.
ಈ ಘಟನೆ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಸಿಲಿಂಡರ್ ಸ್ಫೋಟಕ್ಕೆ ನಿಖರ ಕಾರಣವೇನು ಎಂಬುದನ್ನು ಪೊಲೀಸರು ಹಾಗೂ ಅಗ್ನಿಶಾಮಕ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

- Advertisement -spot_img

More articles

- Advertisement -spot_img

Latest article