No menu items!
22.4 C
Munich
Friday, July 24, 2026

ನೀಟ್ ಪ್ರತಿಭಟನೆಗಳ ಹಿಂದೆ ವ್ಯವಸ್ಥಿತ ಪಿತೂರಿ; ಭಾರತವನ್ನು ಅಸ್ಥಿರಗೊಳಿಸುವ ಪ್ರಯತ್ನ – ಪ್ರತಾಪ್ ಸಿಂಹ ಆರೋಪ

Must read

ನೀಟ್ ಪ್ರತಿಭಟನೆಗಳ ಹಿಂದೆ ವ್ಯವಸ್ಥಿತ ಪಿತೂರಿ; ಭಾರತವನ್ನು ಅಸ್ಥಿರಗೊಳಿಸುವ ಪ್ರಯತ್ನ – ಪ್ರತಾಪ್ ಸಿಂಹ ಆರೋಪ

ಮೈಸೂರು: ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ ದೇಶದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಭಾರತವನ್ನು ಅಸ್ಥಿರಗೊಳಿಸುವ ವ್ಯವಸ್ಥಿತ ಪಿತೂರಿಯ ಭಾಗವಾಗಿವೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ. ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ರಾಜ್ಯ ಕಾಂಗ್ರೆಸ್ ಹಾಗೂ ದೆಹಲಿಯ ಕಾಂಗ್ರೆಸ್ನೊಂದಿಗೆ ಸೇರಿಕೊಂಡು ಈ ಪ್ರತಿಭಟನೆಗಳನ್ನು ನಡೆಸುತ್ತಿದೆ ಎಂದು ಅವರು ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ನೀಟ್ ಮರುಪರೀಕ್ಷೆ ಪೂರ್ಣಗೊಂಡು ಫಲಿತಾಂಶ ಪ್ರಕಟವಾದ ಹಲವು ದಿನಗಳ ಬಳಿಕ ಪ್ರತಿಭಟನೆಗಳು ಆರಂಭವಾಗಿರುವುದು ಅನುಮಾನಗಳಿಗೆ ಕಾರಣವಾಗಿದೆ. ಇದು ಸ್ವಯಂಸ್ಫೂರ್ತಿಯ ಹೋರಾಟವಲ್ಲ, ಪೂರ್ವಯೋಜಿತವಾಗಿ ರೂಪಿಸಲಾದ ಪ್ರತಿಭಟನೆ ಎಂದು ಅವರು ಅಭಿಪ್ರಾಯಪಟ್ಟರು.
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಹಾಗೂ ಕೃಷಿ ಕಾಯ್ದೆಗಳ ವಿರುದ್ಧ ಈ ಹಿಂದೆ ನಡೆದ ಪ್ರತಿಭಟನೆಗಳ ಮಾದರಿಯಲ್ಲಿಯೇ ಈಗಲೂ ಮೋದಿ ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ಹೋರಾಟಗಳನ್ನು ಸಂಘಟಿಸಲಾಗುತ್ತಿದೆ ಎಂದು ಅವರು ಆರೋಪಿಸಿದರು.
ಇದೇ ವೇಳೆ, ಇಂತಹ ಚಟುವಟಿಕೆಗಳಿಗೆ ಅಮೆರಿಕನ್ “ಡೀಪ್ ಸ್ಟೇಟ್”ನಿಂದ ಹಣಕಾಸಿನ ನೆರವು ದೊರೆಯುತ್ತಿದೆ ಎಂದು ಪ್ರತಾಪ್ ಸಿಂಹ ಆರೋಪಿಸಿದರು. ಬಾಂಗ್ಲಾದೇಶ, ಶ್ರೀಲಂಕಾ ಹಾಗೂ ನೇಪಾಳದಲ್ಲಿ ಸರ್ಕಾರಗಳ ವಿರುದ್ಧ ಇದೇ ರೀತಿಯ ತಂತ್ರಗಳನ್ನು ಬಳಸಲಾಗಿದ್ದು, ಈಗ ಭಾರತದಲ್ಲೂ ಅದೇ ಮಾದರಿಯ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದರು.
ದೇಶದ ಹಿತಾಸಕ್ತಿಯನ್ನು ಕಾಪಾಡುವ ನಾಯಕತ್ವವನ್ನು ದುರ್ಬಲಗೊಳಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಸಂಚು ರೂಪಿಸಲಾಗುತ್ತಿದೆ ಎಂದು ಪ್ರತಾಪ್ ಸಿಂಹ ತಮ್ಮ ಆರೋಪವನ್ನು ಪುನರುಚ್ಚರಿಸಿದರು.

- Advertisement -spot_img

More articles

- Advertisement -spot_img

Latest article