No menu items!
29.4 C
Munich
Saturday, July 25, 2026

ಪ್ರಧಾನ್ ರಾಜೀನಾಮೆಯಿಂದ ಹೋರಾಟ ಅಂತ್ಯವಲ್ಲ: ಇನ್ನೆರಡು ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಮುಂದುವರಿಯಲಿದೆ ಎಂದ ಅಭಿಜಿತ್ ದಿಪ್ಕೆ

Must read

ಪ್ರಧಾನ್ ರಾಜೀನಾಮೆಯಿಂದ ಹೋರಾಟ ಅಂತ್ಯವಲ್ಲ: ಇನ್ನೆರಡು ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಮುಂದುವರಿಯಲಿದೆ ಎಂದ ಅಭಿಜಿತ್ ದಿಪ್ಕೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದು ತಮ್ಮ ಹೋರಾಟದ ಮೊದಲ ಗೆಲುವು ಮಾತ್ರವಾಗಿದ್ದು, ಉಳಿದಿರುವ ಎರಡು ಪ್ರಮುಖ ಬೇಡಿಕೆಗಳು ಈಡೇರುವವರೆಗೂ ಜಂತರ್ ಮಂತರ್ನಲ್ಲಿ ಪ್ರತಿಭಟನೆ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜಿತ್ ದಿಪ್ಕೆ ಘೋಷಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ದಿಪ್ಕೆ, “ನಾವು ಸಾಧಿಸಿದ್ದೇವೆ” ಎಂಬ ಸಂದೇಶದೊಂದಿಗೆ ಪೋಸ್ಟ್ ಹಂಚಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಮೊದಲ ಬಾರಿಗೆ ಸಚಿವರೊಬ್ಬರು ರಾಜೀನಾಮೆ ನೀಡಿರುವುದನ್ನು ಅವರು ತಮ್ಮ ಹೋರಾಟದ ಪ್ರಮುಖ ಸಾಧನೆ ಎಂದು ಬಣ್ಣಿಸಿದ್ದಾರೆ.
ಆದರೆ ತಮ್ಮ ಮೂರು ಬೇಡಿಕೆಗಳಲ್ಲಿ ಇನ್ನೂ ಎರಡು ಈಡೇರಿಲ್ಲ ಎಂದು ಹೇಳಿರುವ ಅವರು, ಸಾವನ್ನಪ್ಪಿದ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ನೀಡಬೇಕು ಹಾಗೂ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ನಡೆಸಿದ ದೆಹಲಿ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಜುಲೈ 20ರಂದು ನಡೆದ ಪ್ರತಿಭಟನೆ ವೇಳೆ ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವವರೆಗೂ ಮತ್ತು ಎಲ್ಲಾ ಮೃತ ವಿದ್ಯಾರ್ಥಿಗಳ ಕುಟುಂಬಗಳಿಗೆ ಸೂಕ್ತ ಪರಿಹಾರ ಘೋಷಿಸುವವರೆಗೂ ತಮ್ಮ ಪ್ರತಿಭಟನೆ ನಿಲ್ಲುವುದಿಲ್ಲ ಎಂದು ದಿಪ್ಕೆ ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ, “ಜಿರಳೆಗಳ ಗೋಜಿಗೆ ಹೋಗಬೇಡಿ” ಎಂದು ಎಚ್ಚರಿಕೆಯ ಸಂದೇಶವನ್ನೂ ನೀಡಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಜನರು ಭಯಪಡುವ ಅಗತ್ಯವಿಲ್ಲ ಎಂದು ಹೇಳಿದ ಅವರು, “ಇದು ಪ್ರಜಾಪ್ರಭುತ್ವ. ಉಳಿದಿರುವ ಎರಡು ಬೇಡಿಕೆಗಳು ಈಡೇರುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ” ಎಂದು ಪುನರುಚ್ಚರಿಸಿದ್ದಾರೆ.
ಇದೇ ವೇಳೆ ಸಭೆಯನ್ನುದ್ದೇಶಿಸಿ ಮಾತನಾಡಿದ ಅಭಿಜಿತ್ ದಿಪ್ಕೆ, “ನಮ್ಮನ್ನು ಜಿರಳೆಗಳು ಎಂದು ಕರೆದ ಸಿಜೆಐ ಸೂರ್ಯಕಾಂತ್ ಜಿ ಅವರಿಗೆ ನಾನು ಧನ್ಯವಾದ ಸಲ್ಲಿಸುತ್ತೇನೆ. ಅವರು ಆ ಪದ ಬಳಸಿರದಿದ್ದರೆ ನಾನು ಭಾರತಕ್ಕೆ ಮರಳುತ್ತಿರಲಿಲ್ಲ, ಯುವಕರು ಬೀದಿಗಿಳಿಯುತ್ತಿರಲಿಲ್ಲ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಯೂ ಆಗುತ್ತಿರಲಿಲ್ಲ. ಆದ್ದರಿಂದ ಸಿಜೆಐ ಅವರಿಗೆ ಧನ್ಯವಾದಗಳು” ಎಂದು ಹೇಳಿದ್ದಾರೆ.

- Advertisement -spot_img

More articles

- Advertisement -spot_img

Latest article