No menu items!
35.4 C
Munich
Thursday, July 30, 2026

ತಮಿಳುನಾಡಿಗೆ ದಿನಕ್ಕೆ 3,500 ಕ್ಯೂಸೆಕ್ ನೀರು ಹರಿಸಿ: ಕರ್ನಾಟಕಕ್ಕೆ ಕಾವೇರಿ ಪ್ರಾಧಿಕಾರದ ನಿರ್ದೇಶನ

Must read

ತಮಿಳುನಾಡಿಗೆ ದಿನಕ್ಕೆ 3,500 ಕ್ಯೂಸೆಕ್ ನೀರು ಹರಿಸಿ: ಕರ್ನಾಟಕಕ್ಕೆ ಕಾವೇರಿ ಪ್ರಾಧಿಕಾರದ ನಿರ್ದೇಶನ

ನವದೆಹಲಿ: ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಶಿಫಾರಸನ್ನು ಎತ್ತಿಹಿಡಿದಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA), ತಮಿಳುನಾಡಿಗೆ ನೀರು ಬಿಡುಗಡೆ ಮಾಡುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
CWRC ಶಿಫಾರಸಿನ ಪ್ರಕಾರ, ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ನೀರನ್ನು ಹರಿಸಬೇಕು ಎಂದು ಆದೇಶಿಸಲಾಗಿತ್ತು. ಈ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮೊರೆ ಹೋಗಿ ಮೇಲ್ಮನವಿ ಸಲ್ಲಿಸಿತ್ತು.
ಆದರೆ, ಮೇಲ್ಮನವಿಯ ವಿಚಾರಣೆ ನಡೆಸಿದ CWMA, ನೀರು ನಿಯಂತ್ರಣ ಸಮಿತಿಯ ಆದೇಶವನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಿ, ತಮಿಳುನಾಡಿಗೆ ನಿಗದಿತ ಪ್ರಮಾಣದ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಸೂಚಿಸಿದೆ.
ದೆಹಲಿನಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಎಸ್.ಕೆ. ಹಲ್ದಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಸಭೆಯಲ್ಲಿ ಕರ್ನಾಟಕದ ಪರವಾಗಿ ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಭಾಗವಹಿಸಿ, ರಾಜ್ಯದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆಯಿರುವ ಪರಿಸ್ಥಿತಿಯನ್ನು ಪ್ರಾಧಿಕಾರದ ಗಮನಕ್ಕೆ ತಂದರು.
ಇನ್ನೊಂದೆಡೆ, ತಮಿಳುನಾಡು ಸರ್ಕಾರದ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಪಾಲ್ಗೊಂಡು ತಮ್ಮ ವಾದವನ್ನು ಮಂಡಿಸಿದರು.
ಎರಡೂ ರಾಜ್ಯಗಳ ವಾದಗಳನ್ನು ಆಲಿಸಿದ ಬಳಿಕ, CWMA ನೀರು ನಿಯಂತ್ರಣ ಸಮಿತಿಯ ಶಿಫಾರಸನ್ನು ಎತ್ತಿಹಿಡಿದು, ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

- Advertisement -spot_img

More articles

- Advertisement -spot_img

Latest article