No menu items!
27.8 C
Munich
Saturday, August 1, 2026

ಮೈಸೂರಿಗೆ ಪ್ರಧಾನಿ ಮೋದಿ ಆಗಮನ: ₹45 ಕೋಟಿ ವೆಚ್ಚದ ವಿವೇಕ ಸ್ಮಾರಕಕ್ಕೆ ಇಂದು ಚಾಲನೆ

Must read

ಮೈಸೂರಿಗೆ ಪ್ರಧಾನಿ ಮೋದಿ ಆಗಮನ: ₹45 ಕೋಟಿ ವೆಚ್ಚದ ವಿವೇಕ ಸ್ಮಾರಕಕ್ಕೆ ಇಂದು ಚಾಲನೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ ಹೆಲಿಕಾಪ್ಟರ್ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸ್ವಾಗತ ಕೋರಿದರು.
ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ನಗರದ ಓವೆಲ್ ಮೈದಾನಕ್ಕೆ ತೆರಳಲಿದ್ದು, ಅಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಧಾನಿಯನ್ನು ಅಧಿಕೃತವಾಗಿ ಸ್ವಾಗತಿಸಲಿದ್ದಾರೆ.
ಇಂದು ಪ್ರಧಾನಿ ಮೋದಿ, ಸ್ವಾಮಿ ವಿವೇಕಾನಂದರ ಐತಿಹಾಸಿಕ ಮೈಸೂರು ಭೇಟಿಯ ನೆನಪಿಗಾಗಿ ನಿರ್ಮಿಸಲಾಗಿರುವ ‘ವಿವೇಕ ಸ್ಮಾರಕ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸುಮಾರು ₹45 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸ್ವಾಮಿ ವಿವೇಕಾನಂದ ಸ್ಮಾರಕ ಹಾಗೂ ಸಾಂಸ್ಕೃತಿಕ ಯುವ ಕೇಂದ್ರವನ್ನು ಅವರು ಉದ್ಘಾಟಿಸಲಿದ್ದಾರೆ.
ಮೈಸೂರಿನ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿ ಸ್ವಾಮಿ ವಿವೇಕಾನಂದರು ತಂಗಿದ್ದ ನೆನಪಿಗಾಗಿ ಈ ಸ್ಮಾರಕವನ್ನು ನಿರ್ಮಿಸಲಾಗಿದ್ದು, ಯುವಜನರಲ್ಲಿ ಸಾಂಸ್ಕೃತಿಕ, ಆಧ್ಯಾತ್ಮಿಕ ಹಾಗೂ ರಾಷ್ಟ್ರೀಯ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಸಾಂಸ್ಕೃತಿಕ ಯುವ ಕೇಂದ್ರವನ್ನೂ ಸ್ಥಾಪಿಸಲಾಗಿದೆ.
ಸ್ಮಾರಕ ಉದ್ಘಾಟನೆಯ ಬಳಿಕ ಪ್ರಧಾನಿ ಮೋದಿ ನಗರದ ಶ್ರೀ ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಿ, ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಲಿದ್ದಾರೆ. ಬಳಿಕ ಆಶ್ರಮದ ಆಡಿಟೋರಿಯಂನಲ್ಲಿ ನಡೆಯಲಿರುವ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿದಂತೆ ಸುಮಾರು 6,000ಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಕಾರ್ಯಕ್ರಮಕ್ಕೆ ವಿಶೇಷ ಪಾಸ್ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಭದ್ರತಾ ದೃಷ್ಟಿಯಿಂದ ನಗರದಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

- Advertisement -spot_img

More articles

- Advertisement -spot_img

Latest article