No menu items!
32.6 C
Munich
Wednesday, August 5, 2026

ರಾಘವೇಂದ್ರ ಹಿಟ್ನಾಳ್ʼಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನ; ಕೊಪ್ಪಳ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ರಾಜೀನಾಮೆ

Must read

ರಾಘವೇಂದ್ರ ಹಿಟ್ನಾಳ್ʼಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನ; ಕೊಪ್ಪಳ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ರಾಜೀನಾಮೆ

ಕೊಪ್ಪಳ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ರಾಘವೇಂದ್ರ ಹಿಟ್ನಾಳ್ ಅವರಿಗೆ ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಕಾಂಗ್ರೆಸ್ನಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಈ ಬೆಳವಣಿಗೆಯನ್ನು ವಿರೋಧಿಸಿ ಕೊಪ್ಪಳ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಜ್ಯೋತಿ ಗೊಂಡಬಾಳ್ ಅವರು ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ ಅವರಿಗೆ ಸಲ್ಲಿಸಿದ್ದು, ಸಚಿವ ಸ್ಥಾನ ಹಂಚಿಕೆಯಲ್ಲಿ ಕೊಪ್ಪಳ ಜಿಲ್ಲೆಗೆ ಅನ್ಯಾಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜೀನಾಮೆ ಪತ್ರದಲ್ಲಿ, 75 ವರ್ಷಗಳ ಇತಿಹಾಸ ಹೊಂದಿರುವ ಕೊಪ್ಪಳ ಜಿಲ್ಲಾ ಕೇಂದ್ರಕ್ಕೆ ಇದುವರೆಗೆ ಸಚಿವ ಸ್ಥಾನ ದೊರೆಯದಿರುವುದು ಬೇಸರದ ಸಂಗತಿ. ಮೂರು ಬಾರಿ ಶಾಸಕರಾಗಿ ಗೆದ್ದು ಜನರ ವಿಶ್ವಾಸ ಗಳಿಸಿರುವ ರಾಘವೇಂದ್ರ ಹಿಟ್ನಾಳ್ ಅವರಿಗೆ ಸಚಿವ ಸ್ಥಾನ ನೀಡದೇ ಇರುವುದು ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಜನರಲ್ಲಿ ನಿರಾಸೆ ಮೂಡಿಸಿದೆ ಎಂದು ಉಲ್ಲೇಖಿಸಿದ್ದಾರೆ.
ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್ ಪಕ್ಷದೊಳಗೆ ಅಸಮಾಧಾನದ ಧ್ವನಿಗಳು ಕೇಳಿಬರುತ್ತಿರುವ ನಡುವೆಯೇ, ಕೊಪ್ಪಳ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯ ರಾಜೀನಾಮೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

- Advertisement -spot_img

More articles

- Advertisement -spot_img

Latest article