No menu items!
22.3 C
Munich
Friday, August 7, 2026

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ!

Must read

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ!

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಸುದೀರ್ಘ ಮನವೊಲಿಕೆಯ ಬಳಿಕ ಬಸವರಾಜ ಹೊರಟ್ಟಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.
ಈ ಹಿಂದೆ ಮುಂಗಾರು ಅಧಿವೇಶನ ಆರಂಭವಾದ ಬಳಿಕ, ಆಗಸ್ಟ್ 14ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೊರಟ್ಟಿ ತಿಳಿಸಿದ್ದರು. ಆದರೆ ಇದೀಗ ಯಾವುದೇ ಒತ್ತಡವಿಲ್ಲದೆ, ಸಂಪೂರ್ಣ ಸ್ವಇಚ್ಛೆಯಿಂದಲೇ ರಾಜೀನಾಮೆ ನೀಡುತ್ತಿರುವುದಾಗಿ ತಮ್ಮ ರಾಜೀನಾಮೆ ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ.
ನೂತನ ಸಭಾಪತಿ ಆಯ್ಕೆಯಾಗುವವರೆಗೆ ಬಸವರಾಜ ಹೊರಟ್ಟಿ ಅವರೇ ಹಂಗಾಮಿ ಸಭಾಪತಿಯಾಗಿ ಮುಂದುವರಿಯಲಿದ್ದಾರೆ.
ವಿಧಾನ ಪರಿಷತ್ನಲ್ಲಿ ಆಡಳಿತಾರೂಢ ಕಾಂಗ್ರೆಸ್ ಬಲ ಹೆಚ್ಚಿರುವ ಹಿನ್ನೆಲೆಯಲ್ಲಿ, ನೂತನ ಸಭಾಪತಿ ಸ್ಥಾನಕ್ಕೆ ಸಲೀಂ ಅಹ್ಮದ್ ಅವರ ಹೆಸರನ್ನು ಹಾಗೂ ಉಪಸಭಾಪತಿ ಸ್ಥಾನಕ್ಕೆ ಉಮಾಶ್ರೀ ಅವರ ಹೆಸರನ್ನು ಕಾಂಗ್ರೆಸ್ ವರಿಷ್ಠರು ಅಂತಿಮಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -spot_img

More articles

- Advertisement -spot_img

Latest article