No menu items!
26.3 C
Munich
Saturday, August 8, 2026

ನಮ್ಮ ಸಚಿವ ಸಂಪುಟದಲ್ಲಿ ಮಹಿಳೆಗೆ ಸ್ಥಾನ ಇದ್ದೇ ಇರುತ್ತದೆ, ಮಹಿಳೆಯರಿಗೆ ಹೆಚ್ಚು ಶಕ್ತಿ ನೀಡುತ್ತೇವೆ’: ಡಿ.ಕೆ. ಶಿವಕುಮಾರ್

Must read

ನಮ್ಮ ಸಚಿವ ಸಂಪುಟದಲ್ಲಿ ಮಹಿಳೆಗೆ ಸ್ಥಾನ ಇದ್ದೇ ಇರುತ್ತದೆ, ಮಹಿಳೆಯರಿಗೆ ಹೆಚ್ಚು ಶಕ್ತಿ ನೀಡುತ್ತೇವೆ’: ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ನೀಡುವ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಹೇಳಿಕೆ ನೀಡಿದ್ದಾರೆ. ನಮ್ಮ ಸಚಿವ ಸಂಪುಟದಲ್ಲಿ ಮಹಿಳೆಗೆ ಸ್ಥಾನ ಇದ್ದೇ ಇರುತ್ತದೆ. ಮಹಿಳೆಯರಿಗೆ ಹೆಚ್ಚು ಶಕ್ತಿ ನೀಡುತ್ತೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧ ಆವರಣದಲ್ಲಿ ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಮಹಿಳಾ ಸಚಿವ ಸ್ಥಾನ ಸೇರಿದಂತೆ ಹಲವು ವಿಚಾರಗಳ ಕುರಿತು ಪ್ರತಿಕ್ರಿಯಿಸಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಹಿಳಾ ಮೀಸಲಾತಿ ಮಸೂದೆ ಕುರಿತು ಚರ್ಚಿಸಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯವಿಲ್ಲ ಎಂಬ ಕೇಂದ್ರ ಸಚಿವ ಕಿರಣ್ ರಿಜಿಜು ಅವರ ಹೇಳಿಕೆ ಕುರಿತು ಪ್ರಶ್ನಿಸಲಾಯಿತು.
ಇದಕ್ಕೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ಮಹಿಳಾ ಮೀಸಲಾತಿ ಮಸೂದೆಯನ್ನು ರೂಪಿಸಿ ಲೋಕಸಭೆಯಲ್ಲಿ ಅಂಗೀಕರಿಸಿದವರು ಕಾಂಗ್ರೆಸ್ ನಾಯಕರು ಎಂದು ಹೇಳಿದರು.
ಲೋಕಸಭೆ ಚುನಾವಣೆಯಲ್ಲೂ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಮಹಿಳೆಯರಿಗೆ ಹೆಚ್ಚಿನ ಸ್ಥಾನಗಳನ್ನು ನೀಡಿತ್ತು. ಸದ್ಯದಲ್ಲೇ ಸಚಿವ ಸಂಪುಟ ವಿಸ್ತರಣೆ ವಿಚಾರ ಬಗೆಹರಿಯಲಿದೆ ಎಂದು ತಿಳಿಸಿದರು.
ಕಿರಣ್ ರಿಜಿಜು ಅವರು ಕಾಂಗ್ರೆಸ್ ಪಕ್ಷದ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಅವರು ತಮ್ಮ ಪಕ್ಷ ಹಾಗೂ ಸರ್ಕಾರದ ಬಗ್ಗೆ ಆಲೋಚಿಸಲಿ ಎಂದು ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.
ದೆಹಲಿಗೆ ತೆರಳುವ ಸಾಧ್ಯತೆ ಕುರಿತು ಮಾಧ್ಯಮಗಳು ಪ್ರಶ್ನಿಸಿದಾಗ, “ದೆಹಲಿಗೆ ಹೋಗಲೇಬೇಕಲ್ಲವೇ. ನಿಮಗೆ ಮಾಹಿತಿ ನೀಡಿಯೇ ಹೋಗುತ್ತೇವೆ” ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

- Advertisement -spot_img

More articles

- Advertisement -spot_img

Latest article