ಬಿಡದಿ ಟೌನ್‌ಶಿಪ್ ವಿಚಾರ: ಸತ್ಯವನ್ನು ಮುಚ್ಚಿಡಲು ಯಾರಿಂದಲೂ ಸಾಧ್ಯವಿಲ್ಲ – ಡಿಕೆ ಶಿವಕುಮಾರ್
ಬೆಂಗಳೂರು, ಆ. 09: ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಸತ್ಯವನ್ನು ಯಾರಿಂದಲೂ ಮುಚ್ಚಿಡಲು ಸಾಧ್ಯವಿಲ್ಲ. ಈ ಬಗ್ಗೆ ಅಧಿವೇಶನದಲ್ಲಿ ಬಂದು ಚರ್ಚೆ ಮಾಡಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಕೆಪಿಸಿಸಿ ಭಾರತ ಜೋಡೋ ಭವನದಲ್ಲಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಬಿಜೆಪಿ ಹಾಗೂ ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆ ಕುರಿತು ಪ್ರತಿಕ್ರಿಯಿಸಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಪ್ರತಿಭಟನೆ ಹಾಗೂ ಪಾದಯಾತ್ರೆ ನಡೆಸುವ ಹಕ್ಕಿದೆ. ಅವರು ಏನು ಬೇಕಾದರೂ ಮಾಡಲಿ. ಆದರೆ ಅಧಿವೇಶನದಲ್ಲಿ ಬಂದು ಈ ವಿಚಾರದ ಬಗ್ಗೆ ಚರ್ಚೆ ಮಾಡಲಿ ಎಂದು ಹೇಳಿದರು.
ಎಲ್ಲೆಲ್ಲಿ ದೂರು ನೀಡಬೇಕೋ ಅಲ್ಲಿ ದೂರು ನೀಡಲಿ. ಸರ್ಕಾರ ಯಾರನ್ನೂ ಬಲವಂತ ಮಾಡುತ್ತಿಲ್ಲ. ಯಾವ ಸಂದರ್ಭದಲ್ಲಿ ಯಾವ ಉತ್ತರ ನೀಡಬೇಕೋ ಆ ಸಂದರ್ಭದಲ್ಲಿ ನೀಡುತ್ತೇವೆ ಎಂದು ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.
ಬಿಡದಿ ಟೌನ್‌ಶಿಪ್ ವಿಚಾರ: ಸತ್ಯವನ್ನು ಮುಚ್ಚಿಡಲು ಯಾರಿಂದಲೂ ಸಾಧ್ಯವಿಲ್ಲ – ಡಿಕೆ ಶಿವಕುಮಾರ್



