No menu items!
20.6 C
Munich
Monday, August 10, 2026

ಭೀಕರ ರಸ್ತೆ ಅಪಘಾತ; ಖಾಸಗಿ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ, ಓರ್ವ ಸಾವು

Must read

ಭೀಕರ ರಸ್ತೆ ಅಪಘಾತ; ಖಾಸಗಿ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ, ಓರ್ವ ಸಾವು

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾವೇರಿ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
ಮೃತರನ್ನು 18 ವರ್ಷದ ಬಾವರಸಿಂಗ್ ರಜಪೂತ್ ಎಂದು ಗುರುತಿಸಲಾಗಿದೆ. ಗೋವಾದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಚಾಲಕ ನಿದ್ರೆಯ ಮಂಪರಿನಲ್ಲಿದ್ದ ಕಾರಣ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ. ಅಪಘಾತದ ಪರಿಣಾಮ ಬಸ್ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹಾವೇರಿ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಪಲ್ಟಿಯಾಗಿದ್ದ ಖಾಸಗಿ ಬಸ್ನ್ನು ಸ್ಥಳದಿಂದ ತೆರವುಗೊಳಿಸಿದ್ದಾರೆ.
ಈ ಘಟನೆ ಹಾವೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ಹೆಚ್ಚಿನ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -spot_img

More articles

- Advertisement -spot_img

Latest article