No menu items!
18.3 C
Munich
Wednesday, August 12, 2026

ಸಚಿವ ಸಂಪುಟದ ಖಾತೆ ಹಂಚಿಕೆ ಅಂತಿಮ; ನೂತನ ಸಚಿವರಿಗೆ ಖಾತೆ ಹಂಚಿದ ಡಿ.ಕೆ. ಶಿವಕುಮಾರ್

Must read

ಸಚಿವ ಸಂಪುಟದ ಖಾತೆ ಹಂಚಿಕೆ ಅಂತಿಮ; ನೂತನ ಸಚಿವರಿಗೆ ಖಾತೆ ಹಂಚಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆ ಕೊನೆಗೂ ಅಂತಿಮಗೊಂಡಿದೆ. ಆಗಸ್ಟ್ 3ರಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ಸಚಿವರಿಗೆ ಹಲವು ದಿನಗಳ ಕಾಲ ಖಾತೆ ಹಂಚಿಕೆ ಮಾಡದಿರುವುದು ಕಾಂಗ್ರೆಸ್ ವಲಯದಲ್ಲಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದು, ಅಧಿಕೃತ ಆದೇಶ ಹೊರಬೀಳುವುದು ಮಾತ್ರ ಬಾಕಿ ಇದೆ ಎಂದು ತಿಳಿದುಬಂದಿದೆ.
ಖಾತೆ ಹಂಚಿಕೆ ವಿಚಾರವಾಗಿ ಸಚಿವ ಆಕಾಂಕ್ಷಿಗಳು ಹಾಗೂ ಹಿರಿಯ ನಾಯಕರ ನಡುವೆ ನಡೆದ ಚರ್ಚೆ, ದೆಹಲಿಯಲ್ಲಿ ಪಕ್ಷದ ವರಿಷ್ಠರೊಂದಿಗೆ ನಡೆದ ಸಭೆಗಳು ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ನಡೆದ ಸುದೀರ್ಘ ಮಾತುಕತೆ ಬಳಿಕ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ.
ಯಾರ್ಯಾರಿಗೆ ಯಾವ ಖಾತೆ?
ಚಲುವರಾಯಸ್ವಾಮಿ ಅವರಿಗೆ ಕೃಷಿ ಇಲಾಖೆ ನೀಡಲಾಗಿದೆ. ಎಚ್.ಸಿ. ಬಾಲಕೃಷ್ಣ ಅವರಿಗೆ ಸಣ್ಣ ನೀರಾವರಿ, ಕೆ.ಎಚ್. ಮುನಿಯಪ್ಪ ಅವರಿಗೆ ಸಾಮಾಜಿಕ ಕಲ್ಯಾಣ, ಸಂತೋಷ್ ಲಾಡ್ ಅವರಿಗೆ ಕಾರ್ಮಿಕ ಇಲಾಖೆ ಜವಾಬ್ದಾರಿ ನೀಡಲಾಗಿದೆ.
ಬಸವಂತಪ್ಪ ಅವರಿಗೆ ಬಂದರು ಮತ್ತು ಮೀನುಗಾರಿಕೆ, ಮಧು ಬಂಗಾರಪ್ಪ ಅವರಿಗೆ ಪ್ರಾಥಮಿಕ ಶಿಕ್ಷಣ, ಕೆ.ಸಿ. ರಾಯರೆಡ್ಡಿ ಅವರಿಗೆ ಉನ್ನತ ಶಿಕ್ಷಣ ಇಲಾಖೆ ನೀಡಲಾಗಿದೆ.
ಬಿ.ಝಡ್. ಜಮೀರ್ ಅಹಮದ್ ಖಾನ್ ಅವರಿಗೆ ವಸತಿ ಇಲಾಖೆ, ಯು.ಟಿ. ಖಾದರ್ ಅವರಿಗೆ ಆರೋಗ್ಯ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್, ಲಕ್ಷ್ಮಣ್ ಸವದಿ ಅವರಿಗೆ ಸಹಕಾರ ಇಲಾಖೆ ಜವಾಬ್ದಾರಿ ನೀಡಲಾಗಿದೆ.
ಡಾ. ಅಜಯ್ ಸಿಂಗ್ ಅವರಿಗೆ ಅರಣ್ಯ, ಎಸ್.ಎಸ್. ಮಲ್ಲಿಕಾರ್ಜುನ ಅವರಿಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯನ್ನು ನೀಡಲಾಗಿದೆ.
ಖಾತೆ ಹಂಚಿಕೆ ವಿಳಂಬದಿಂದಾಗಿ ಹಲವು ಸಚಿವರು ಹಾಗೂ ಶಾಸಕರಲ್ಲಿ ಅಸಮಾಧಾನ ವ್ಯಕ್ತವಾಗಿತ್ತು. ವಿಶೇಷವಾಗಿ ಕೃಷಿ, ಶಿಕ್ಷಣ, ಆರೋಗ್ಯ ಮತ್ತು ಸಹಕಾರದಂತಹ ಪ್ರಮುಖ ಇಲಾಖೆಗಳಿಗಾಗಿ ಪೈಪೋಟಿ ನಡೆದಿತ್ತು ಎನ್ನಲಾಗಿತ್ತು.

- Advertisement -spot_img

More articles

- Advertisement -spot_img

Latest article