No menu items!
30.2 C
Munich
Thursday, August 13, 2026

ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ ಆರೋಪ: ಸ್ಯಾಂಡಲ್ ವುಡ್ ನಟಿಯ ಸಹೋದರಿಯಿಂದ ಗೆಳೆಯನ ವಿರುದ್ಧ ದೂರು

Must read

ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ ಆರೋಪ: ಸ್ಯಾಂಡಲ್ ವುಡ್ ನಟಿಯ ಸಹೋದರಿಯಿಂದ ಗೆಳೆಯನ ವಿರುದ್ಧ ದೂರು

ಬೆಂಗಳೂರು: ಸ್ಯಾಂಡಲ್ವುಡ್ ನಟಿಯೊಬ್ಬರ ಸಹೋದರಿ ನೀಡಿದ ದೂರಿನ ಆಧಾರದ ಮೇಲೆ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ರಾಘವೇಂದ್ರ ಎಂಬಾತನನ್ನು ಚಂದ್ರಲೇಔಟ್ ಪೊಲೀಸರು ಬಂಧಿಸಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ ತಮ್ಮ ಇಚ್ಛೆಗೆ ವಿರುದ್ಧವಾಗಿ ದೈಹಿಕ ಸಂಪರ್ಕ ಹೊಂದಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.
ದೂರುದಾರ ಮಹಿಳೆ ಹಾಗೂ ರಾಘವೇಂದ್ರ ಇಬ್ಬರೂ ಒಂದೇ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಪರಿಚಯವಾಗಿದ್ದರು ಎನ್ನಲಾಗಿದೆ. ಆರಂಭದಲ್ಲಿ ಕೆಲಸದ ವಿಚಾರವಾಗಿ ಪರಿಚಯವಾಗಿದ್ದ ಇವರ ನಡುವೆ ಬಳಿಕ ಸ್ನೇಹ ಬೆಳೆದಿದ್ದು, ನಂತರ ಆತ್ಮೀಯ ಸಂಬಂಧಕ್ಕೆ ತಿರುಗಿತ್ತು ಎಂದು ತಿಳಿದುಬಂದಿದೆ.
ರಾಘವೇಂದ್ರ ಮದುವೆಯಾಗುವುದಾಗಿ ಭರವಸೆ ನೀಡಿದ್ದ ಹಿನ್ನೆಲೆಯಲ್ಲಿ ಇಬ್ಬರ ನಡುವೆ ಆತ್ಮೀಯ ಸಂಬಂಧ ಬೆಳೆದಿತ್ತು ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಆದರೆ ತಮ್ಮ ಇಚ್ಛೆಗೆ ವಿರುದ್ಧವಾಗಿ ದೈಹಿಕ ಸಂಪರ್ಕ ಹೊಂದಿದ್ದಾನೆ ಎಂದು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಇದೇ ವೇಳೆ, ರಾಘವೇಂದ್ರ ತಮ್ಮ ಕ್ರೆಡಿಟ್ ಕಾರ್ಡ್ ಬಳಸಿಕೊಂಡು ಸಾಲ ಪಡೆದಿದ್ದಾನೆ ಎಂದು ಮಹಿಳೆ ಮತ್ತೊಂದು ಆರೋಪ ಮಾಡಿದ್ದಾರೆ. ಈ ವಿಚಾರ ತಿಳಿದು ಆತನನ್ನು ಪ್ರಶ್ನಿಸಿದಾಗ, ರಾಘವೇಂದ್ರ ಈಗಾಗಲೇ ಮದುವೆಯಾಗಿರುವುದು ತಿಳಿದುಬಂದಿದೆ ಎಂದು ಅವರು ದೂರಿನಲ್ಲಿ ಹೇಳಿದ್ದಾರೆ.
ತಾನು ಈಗಾಗಲೇ ಮದುವೆಯಾಗಿರುವ ವಿಚಾರವನ್ನು ರಾಘವೇಂದ್ರ ಮುಚ್ಚಿಟ್ಟಿದ್ದಾನೆ ಎಂದು ಆರೋಪಿಸಿರುವ ಮಹಿಳೆ, ಈ ಬಗ್ಗೆ ಪ್ರಶ್ನಿಸಿದಾಗ ಫೋಟೋವೊಂದನ್ನು ತೋರಿಸಿ ಬೆದರಿಕೆ ಹಾಕಿದ್ದಾನೆ ಎಂದೂ ದೂರಿದ್ದಾರೆ.
ಈ ಆರೋಪಗಳ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಚಂದ್ರಲೇಔಟ್ ಪೊಲೀಸರು ತನಿಖೆ ನಡೆಸಿ ರಾಘವೇಂದ್ರನನ್ನು ಬಂಧಿಸಿದ್ದಾರೆ.
ಇದೀಗ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ರಾಘವೇಂದ್ರ ಕೂಡ ನಟಿಯ ಸಹೋದರಿ ವಿರುದ್ಧ ದೂರು ನೀಡಿದ್ದಾರೆ ಎನ್ನಲಾಗಿದೆ.
ತಮಗೆ ಹಾಗೂ ತಮ್ಮ ತಾಯಿಗೆ ಕರೆ ಮಾಡಿ ಬೆದರಿಕೆ ಹಾಕಲಾಗಿದೆ ಎಂದು ರಾಘವೇಂದ್ರ ಆರೋಪಿಸಿದ್ದಾರೆ. ಈ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಎನ್ಸಿಆರ್ ದಾಖಲಾಗಿದೆ.
ಎರಡೂ ಕಡೆಯ ಆರೋಪಗಳ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದು, ಪ್ರಕರಣದ ಸತ್ಯಾಸತ್ಯತೆ ತನಿಖೆಯ ಬಳಿಕ ಹೊರಬರಬೇಕಿದೆ.

- Advertisement -spot_img

More articles

- Advertisement -spot_img

Latest article