No menu items!
22.4 C
Munich
Sunday, August 16, 2026

ಮೂರನೇ ಮಹಡಿಯಿಂದ ಬಿದ್ದು ಒಂದೂವರೆ ವರ್ಷದ ಮಗುವಿಗೆ ಗಂಭೀರ ಗಾಯ

Must read

ಮೂರನೇ ಮಹಡಿಯಿಂದ ಬಿದ್ದು ಒಂದೂವರೆ ವರ್ಷದ ಮಗುವಿಗೆ ಗಂಭೀರ ಗಾಯ
ಬೆಂಗಳೂರು: ತಂದೆ-ತಾಯಿ ನಿರ್ಲಕ್ಷ್ಯದಿಂದ ಒಂದೂವರೆ ವರ್ಷದ ಮಗು ಮೂರನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಡಿವಾಳ ಪೊಲೀಸ್ ಠಾಣೆ ವ್ಯಾಪ್ತಿಯ ಚಿಕ್ಕ ಆಡುಗೋಡಿಯಲ್ಲಿ ನಡೆದಿದೆ.
ಆಗಸ್ಟ್ 15ರಂದು ಬೆಳಗ್ಗೆ ಸುಮಾರು 10.50ಕ್ಕೆ ಈ ಅವಘಡ ಸಂಭವಿಸಿದೆ. ಮಗುವನ್ನು ಮನೆಯ ಮುಂದೆ ಆಟವಾಡಲು ಬಿಟ್ಟು ಪೋಷಕರು ಕಾಳಜಿ ವಹಿಸದೇ ಇದ್ದ ವೇಳೆ ಮಗು ಗ್ರಿಲ್ ಮೇಲೆ ಹತ್ತಿದೆ ಎನ್ನಲಾಗಿದೆ.
ಈ ವೇಳೆ ಆಯತಪ್ಪಿ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಮಗು ನೆಲಕ್ಕೆ ಬಿದ್ದು ಬಳಿಕ ಬೌನ್ಸ್ ಆಗಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮಗು ಕೆಳಗೆ ಬಿದ್ದಿದ್ದನ್ನು ಗಮನಿಸಿದ ಸ್ಥಳೀಯರು ಕೂಡಲೇ ಧಾವಿಸಿ ಮಗುವನ್ನು ರಕ್ಷಿಸಿದ್ದಾರೆ. ಕ್ಷಣ ಮಾತ್ರದಲ್ಲಿ ಬೈಕ್‌ನಲ್ಲಿ ಮಗುವನ್ನು ಕೋರಮಂಗಲದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ.
ಸದ್ಯ ಗಂಭೀರವಾಗಿ ಗಾಯಗೊಂಡಿರುವ ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದೆ.
ಮಕ್ಕಳಿಗೆ ಜನ್ಮ ನೀಡುವುದು ಮಾತ್ರವಲ್ಲ, ಅವರ ಸುರಕ್ಷತೆ ಮತ್ತು ಜವಾಬ್ದಾರಿಯನ್ನೂ ಪೋಷಕರು ನಿಭಾಯಿಸಬೇಕು ಎಂಬುದನ್ನು ಈ ಘಟನೆ ಮತ್ತೊಮ್ಮೆ ಎಚ್ಚರಿಸಿದೆ.

- Advertisement -spot_img

More articles

- Advertisement -spot_img

Latest article