No menu items!
22.4 C
Munich
Sunday, August 16, 2026

ಕಳ್ಳಭೇಟೆಗಾರರ ಮೇಲೆ ಗುಂಡಿನ ದಾಳಿ; ಮೃತರ ಕುಟುಂಬಸ್ಥರು ಹಾಗೂ ಸಾರ್ವಜನಿಕರಿಂದ ಇಡೀ ರಾತ್ರಿ ಪ್ರತಿಭಟನೆ

Must read

ಕಳ್ಳಭೇಟೆಗಾರರ ಮೇಲೆ ಗುಂಡಿನ ದಾಳಿ; ಮೃತರ ಕುಟುಂಬಸ್ಥರು ಹಾಗೂ ಸಾರ್ವಜನಿಕರಿಂದ ಇಡೀ ರಾತ್ರಿ ಪ್ರತಿಭಟನೆ
ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಶೂಟೌಟ್‌ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಸ್ಥರು ಹಾಗೂ ಸಾರ್ವಜನಿಕರು ಇಡೀ ರಾತ್ರಿ ಪ್ರತಿಭಟನೆ ನಡೆಸಿದರು.
ಶೂಟೌಟ್‌ಗೆ ಆದೇಶ ನೀಡಿದವರು ಯಾರು ಎಂಬುದನ್ನು ಬಹಿರಂಗಪಡಿಸಬೇಕು. ಗುಂಡಿನ ದಾಳಿ ನಡೆಸಿದ ಅರಣ್ಯ ಇಲಾಖೆಯ 7 ಸಿಬ್ಬಂದಿಯನ್ನು ಕೂಡಲೇ ವಜಾಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಮೃತರ ಕುಟುಂಬಗಳಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಹಾಗೂ ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ತನಿಖೆ ಪೂರ್ಣಗೊಳ್ಳುವವರೆಗೂ ಮೃತದೇಹಗಳ ಮರಣೋತ್ತರ ಪರೀಕ್ಷೆಗೆ ಅವಕಾಶ ನೀಡುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.
ತಡರಾತ್ರಿ ಪ್ರತಿಭಟನಾ ಸ್ಥಳಕ್ಕೆ ಸ್ಥಳೀಯ ಶಾಸಕ ಮಂಜುನಾಥ್ ಭೇಟಿ ನೀಡಿ, ಘಟನೆ ನಡೆಯಬಾರದಿತ್ತು. ಸರ್ಕಾರ ಈಗಾಗಲೇ ತನಿಖೆಗೆ ಆದೇಶ ನೀಡಿದ್ದು, ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದರು.
ಆದರೆ ಶಾಸಕರ ಮನವೊಲಿಕೆಗೆ ಪ್ರತಿಭಟನಾಕಾರರು ಬಗ್ಗದೆ ಪ್ರತಿಭಟನೆ ಮುಂದುವರಿಸಿದರು. ಇಡೀ ರಾತ್ರಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಅವರು, ಇಂದು ಬೆಳಗ್ಗೆಯಿಂದಲೂ ಪ್ರತಿಭಟನೆ ಮುಂದುವರಿಸಿದ್ದಾರೆ.
ಮೂವರ ಸಾವಿಗೆ ಕಾರಣವಾದ ಶೂಟೌಟ್ ಪ್ರಕರಣ ಇದೀಗ ಜಿಲ್ಲಾಡಳಿತ ಹಾಗೂ ಸರ್ಕಾರಕ್ಕೆ ಬಿಸಿತುಪ್ಪವಾಗಿ ಪರಿಣಮಿಸಿದೆ.

- Advertisement -spot_img

More articles

- Advertisement -spot_img

Latest article