No menu items!
22.4 C
Munich
Sunday, August 16, 2026

ಕಂಪನಿಯಲ್ಲೇ ಕೆಲಸ ಮಾಡುತ್ತಿದ್ದ ಮಾಜಿ ಸಿಬ್ಬಂದಿಯಿಂದಲೇ ಕಳ್ಳತನ: 2 ಕೋಟಿ ನಷ್ಟ

Must read

ಕಂಪನಿಯಲ್ಲೇ ಕೆಲಸ ಮಾಡುತ್ತಿದ್ದ ಮಾಜಿ ಸಿಬ್ಬಂದಿಯಿಂದಲೇ ಕಳ್ಳತನ: 2 ಕೋಟಿ ನಷ್ಟ

ಬೆಂಗಳೂರು ಗ್ರಾಮಾಂತರ: ಖಾಸಗಿ ಕಂಪನಿಗೆ ಸೇರಿದ ಸುಮಾರು 2 ಕೋಟಿ ರೂಪಾಯಿ ಮೌಲ್ಯದ ಕಟ್ಟಿಂಗ್ ಟೂಲ್ಸ್ ಕಳ್ಳತನ ಮಾಡಿರುವ ಪ್ರಕರಣವನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಿ, ಸುಮಾರು 80 ಲಕ್ಷ ರೂಪಾಯಿ ಮೌಲ್ಯದ ಕಟ್ಟಿಂಗ್ ಟೂಲ್ಸ್‌ಗಳನ್ನು ಜಪ್ತಿ ಮಾಡಿದ್ದಾರೆ.
ಸೋಮಶೇಖರ್, ಚಂದ್ರಶೇಖರ್, ಧನುಷ್, ನಾಗಭೂಷಣ್ ಹಾಗೂ ಹರೀಶ್ ಬಂಧಿತ ಆರೋಪಿಗಳು. ಇವರು ದೊಡ್ಡಬಳ್ಳಾಪುರದ ವೈಜಿ ಖಾಸಗಿ ಕಂಪನಿಯಲ್ಲಿ ಈ ಹಿಂದೆ ಉದ್ಯೋಗಿಗಳಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಉದ್ಯೋಗದಲ್ಲಿದ್ದ ಸಂದರ್ಭದಲ್ಲಿ ಆರೋಪಿಗಳು ಹಂತ ಹಂತವಾಗಿ ಕಂಪನಿಯ ಕಟ್ಟಿಂಗ್ ಟೂಲ್ಸ್‌ಗಳನ್ನು ಕಳ್ಳತನ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
2025ನೇ ಸಾಲಿನ ಆಡಿಟ್ ಸಂದರ್ಭದಲ್ಲಿ ಕಂಪನಿಯ ಸ್ಟಾಕ್‌ನಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿತ್ತು. ದೂರು ದಾಖಲಿಸಿಕೊಂಡ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತರಿಂದ ಸುಮಾರು 80 ಲಕ್ಷ ರೂಪಾಯಿ ಮೌಲ್ಯದ ಕಟ್ಟಿಂಗ್ ಟೂಲ್ಸ್‌ಗಳನ್ನು ಜಪ್ತಿ ಮಾಡಲಾಗಿದ್ದು, ಉಳಿದ ವಸ್ತುಗಳ ಪತ್ತೆ ಹಾಗೂ ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

- Advertisement -spot_img

More articles

- Advertisement -spot_img

Latest article