No menu items!
16.8 C
Munich
Tuesday, August 18, 2026

₹80 ಲಕ್ಷದವರೆಗೆ ಲಂಚ ಆರೋಪ; ಅಮಾನತುಗೊಂಡ KPSC ಸದಸ್ಯ ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ ಹಲವೆಡೆ ED ಶೋಧ

Must read

₹80 ಲಕ್ಷದವರೆಗೆ ಲಂಚ ಆರೋಪ; ಅಮಾನತುಗೊಂಡ KPSC ಸದಸ್ಯ ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ ಹಲವೆಡೆ ED ಶೋಧ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ಕರ್ನಾಟಕ ಮತ್ತು ಗುಜರಾತ್ನ ಒಟ್ಟು 21 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿರುವ ಅಧಿಕಾರಿಗಳು, ಹಲವು ದಾಖಲೆಗಳು ಹಾಗೂ ಪ್ರಮುಖ ಮಾಹಿತಿಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಅಮಾನತುಗೊಂಡಿರುವ KPSC ಸದಸ್ಯ ಶಿವಶಂಕರಪ್ಪ ಸಾಹುಕಾರ್ ಅವರ ನಿವಾಸ, KPSC ಕಚೇರಿ, ಸದಸ್ಯೆ ಶಾಂತಾ ಹೊಸಮನಿ ಅವರ ನಿವಾಸ ಹಾಗೂ ‘M/s ಎಡುಟೆಸ್ಟ್ ಸೊಲ್ಯೂಷನ್ಸ್’ ಸಂಸ್ಥೆಗೆ ಸಂಬಂಧಿಸಿದ ಸ್ಥಳಗಳ ಮೇಲೂ ED ಅಧಿಕಾರಿಗಳು ಶೋಧ ನಡೆಸಿದ್ದಾರೆ.
ಇದರ ಜೊತೆಗೆ ಪ್ರಕರಣದಲ್ಲಿ ಮಧ್ಯವರ್ತಿಗಳಾಗಿ ಶಂಕಿಸಲಾಗಿರುವ ವ್ಯಕ್ತಿಗಳು ಹಾಗೂ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾಗಿರುವ ಅಭ್ಯರ್ಥಿಗಳ ಮನೆಗಳಲ್ಲೂ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
₹80 ಲಕ್ಷದವರೆಗೆ ಲಂಚ ಪಡೆದ ಆರೋಪ
ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಪ್ರತಿ ಅಭ್ಯರ್ಥಿಯಿಂದ ₹70ರಿಂದ ₹80 ಲಕ್ಷದವರೆಗೆ ಲಂಚ ಪಡೆಯಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಹಣ ಪಡೆದು ಉತ್ತರ ಪತ್ರಿಕೆಗಳಲ್ಲಿ ಅಕ್ರಮವಾಗಿ ತಿದ್ದುಪಡಿ ಮಾಡಲಾಗಿದೆ ಹಾಗೂ KPSC ಅಧಿಕಾರಿಗಳ ಸಂಬಂಧಿಕರಿಗೆ ಅಕ್ರಮವಾಗಿ ಹುದ್ದೆಗಳನ್ನು ಕೊಡಿಸಲಾಗಿದೆ ಎಂಬ ಆರೋಪಗಳೂ ಪ್ರಕರಣದಲ್ಲಿ ಕೇಳಿಬಂದಿವೆ.
ಈ ಅಕ್ರಮಗಳಿಗೆ ಸಂಬಂಧಿಸಿದಂತೆ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ನಾಲ್ಕು ಪ್ರತ್ಯೇಕ FIRಗಳು ದಾಖಲಾಗಿದ್ದವು.
KPSC ಸದಸ್ಯ ಶಿವಶಂಕರಪ್ಪ ಸಾಹುಕಾರ್ ಅಮಾನತು
ತಮ್ಮ ಪುತ್ರಿಯರ ಅಕ್ರಮ ನೇಮಕಾತಿಗೆ ನೆರವಾದ ಆರೋಪದ ಹಿನ್ನೆಲೆಯಲ್ಲಿ KPSC ಸದಸ್ಯ ಶಿವಶಂಕರಪ್ಪ ಸಾಹುಕಾರ್ ಅವರನ್ನು ಜುಲೈ 13ರಂದು ರಾಜ್ಯಪಾಲರು ಅಮಾನತುಗೊಳಿಸಿದ್ದರು.
ಇದೀಗ ಪ್ರಕರಣದ ತನಿಖೆಯ ಭಾಗವಾಗಿ ED ಅಧಿಕಾರಿಗಳು ಕರ್ನಾಟಕ ಮತ್ತು ಗುಜರಾತ್ನ 21 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿರುವುದು ಪ್ರಕರಣಕ್ಕೆ ಮತ್ತಷ್ಟು ಮಹತ್ವ ಪಡೆದುಕೊಂಡಿದೆ. ದಾಳಿಯ ವೇಳೆ ಪತ್ತೆಯಾಗಿರುವ ದಾಖಲೆಗಳು ಹಾಗೂ ಇತರೆ ಸಾಕ್ಷ್ಯಾಧಾರಗಳ ಆಧಾರದ ಮೇಲೆ ತನಿಖೆ ಮುಂದುವರಿಯುವ ಸಾಧ್ಯತೆಯಿದೆ.

- Advertisement -spot_img

More articles

- Advertisement -spot_img

Latest article