No menu items!
20 C
Munich
Thursday, August 20, 2026

ರಾಜ್ಯದಲ್ಲಿ ಮುಂದುವರಿದ ಮಳೆ ಅಬ್ಬರ: ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ

Must read

ರಾಜ್ಯದಲ್ಲಿ ಮುಂದುವರಿದ ಮಳೆ ಅಬ್ಬರ: ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ನೈಋತ್ಯ ಮಾನ್ಸೂನ್ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿದ ಮುನ್ಸೂಚನೆಯಂತೆ, ಕರಾವಳಿ ಭಾಗದಲ್ಲಿ ಇಂದೂ ಕೂಡ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಮಂಗಳೂರು, ಉಡುಪಿ ಸೇರಿದಂತೆ ಕರಾವಳಿಯ ಬಹುತೇಕ ಭಾಗಗಳಲ್ಲಿ ಮೋಡಕವಿದ ವಾತಾವರಣವಿದ್ದು, ಇಡೀ ದಿನ ಬಿಟ್ಟು ಬಿಟ್ಟು ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಕಡಲಿನಲ್ಲಿ ಗಾಳಿಯ ವೇಗ ಹೆಚ್ಚಿರುವುದರಿಂದ ಮೀನುಗಾರರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ. ಮಲೆನಾಡಿನ ಘಟ್ಟ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ನದಿ ಮತ್ತು ಹಳ್ಳ-ಕೊಳ್ಳಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ.
ಮುಂದಿನ 7 ದಿನಗಳ ಮಳೆ ಮುನ್ಸೂಚನೆ (ಮೂಲ: IMD):
ಕರ್ನಾಟಕ ರಾಜ್ಯದಾದ್ಯಂತ ಅಲ್ಲಲ್ಲಿ ಜೋರಾದ ಗಾಳಿಯೊಂದಿಗೆ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡುಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ಉಳಿದಂತೆ ಮೋಡಕವಿದ ವಾತಾವರಣ ಇರಲಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಭಾಗಶಃ ಮೋಡಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಈ ಸಮಯದಲ್ಲಿ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡುವಂತೆ ಎಲ್ಲಾ ಜಿಲ್ಲೆಗಳಿಗೂ ಅಲರ್ಟ್ ನೀಡಲಾಗಿದೆ. ಮಳೆಗಾಲವಾದ ಕಾರಣ ಮಕ್ಕಳು ಹಾಗೂ ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡುವಂತೆ ಮನವಿ ಮಾಡಲಾಗಿದ್ದು, ಹೆಚ್ಚು ನೀರು ಹರಿಯುವ ಪ್ರದೇಶಗಳಲ್ಲಿ ಎಚ್ಚರಿಕೆಯಿಂದಿರುವಂತೆ ಸೂಚಿಸಲಾಗಿದೆ. ಅದರಲ್ಲೂ ಕರಾವಳಿ ಭಾಗಗಳಲ್ಲಿ ಸಮುದ್ರ, ನದಿಗಳಿಗೆ ಇಳಿಯದಂತೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ.

- Advertisement -spot_img

More articles

- Advertisement -spot_img

Latest article