No menu items!
21.9 C
Munich
Wednesday, August 26, 2026

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಭರ್ಜರಿ ಸಿದ್ಧತೆ; ಮೊದಲ ಹಂತದ ಗಜಪಯಣಕ್ಕೆ ಅದ್ಧೂರಿ ಚಾಲನೆ!

Must read

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಭರ್ಜರಿ ಸಿದ್ಧತೆ; ಮೊದಲ ಹಂತದ ಗಜಪಯಣಕ್ಕೆ ಅದ್ಧೂರಿ ಚಾಲನೆ!

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ಗಜಪಯಣಕ್ಕೆ ಅದ್ಧೂರಿ ಚಾಲನೆ ದೊರೆತಿದೆ.
ಹುಣಸೂರಿನ ವೀರನಹೊಸಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ದಸರಾ ಗಜಪಡೆಗೆ ಚಾಲನೆ ನೀಡಿದರು.
ಬೆಳಗ್ಗೆ 10 ಗಂಟೆಯಿಂದ 10 ಗಂಟೆ 28 ನಿಮಿಷದವರೆಗೆ ನಡೆದ ಶುಭ ತುಲಾ ಲಗ್ನದಲ್ಲಿ ಗಜಪಡೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಫಲತಾಂಬೂಲ ನೀಡಿ ಗಜಪಯಣಕ್ಕೆ ಚಾಲನೆ ನೀಡಲಾಗಿದ್ದು, ಆನೆಗಳು ಕಾಡಿನಿಂದ ನಾಡಿನತ್ತ ಹೆಜ್ಜೆ ಹಾಕಿವೆ.
ದಸರಾ ಗಜಪಯಣದ ಮೊದಲ ಹಂತದಲ್ಲಿ ಧನಂಜಯ, ಮಹೇಂದ್ರ, ಏಕಲವ್ಯ, ಪ್ರಶಾಂತ, ಗೋಪಿ, ಶ್ರೀರಾಮ, ಸುಗ್ರೀವ, ಲಕ್ಷ್ಮೀ ಹಾಗೂ ಅಭಿಮನ್ಯು ಸೇರಿದಂತೆ ಒಟ್ಟು 9 ಆನೆಗಳು ಆಗಮಿಸಿವೆ.
ಇನ್ನು ಸತತ 6 ವರ್ಷಗಳ ಕಾಲ ಯಾವುದೇ ವಿಘ್ನವಿಲ್ಲದೆ ಜಂಬೂಸವಾರಿಯನ್ನು ಯಶಸ್ವಿಯಾಗಿ ನೆರವೇರಿಸಿದ್ದ ಅಭಿಮನ್ಯು ಆನೆಗೆ ಅರಣ್ಯ ಇಲಾಖೆ ವಿಶೇಷ ಬೀಳ್ಕೊಡುಗೆ ನೀಡಿದೆ.
ಬಣ್ಣಬಣ್ಣದ ಚಿತ್ತಾರ ಹಾಗೂ ವಿಶೇಷ ಅಲಂಕಾರದಿಂದ ಸಿಂಗಾರಗೊಂಡಿದ್ದ ಅಭಿಮನ್ಯುವನ್ನು ಶಂಖ, ಚಕ್ರ, ಗಂಡಭೇರುಂಡ ಮತ್ತು ಹೂವಿನ ಬಳ್ಳಿ ಅಲಂಕಾರಗಳೊಂದಿಗೆ ಮೆರವಣಿಗೆಯಲ್ಲಿ ಕರೆತರಲಾಯಿತು. ದಾರಿಯುದ್ದಕ್ಕೂ ಸಿಬ್ಬಂದಿ ಅಭಿಮನ್ಯುವಿನ ಮೇಲೆ ಹೂಮಳೆ ಸುರಿಸಿ ಗೌರವ ಸಲ್ಲಿಸಿದರು.
ಅರಣ್ಯ ಇಲಾಖೆಯ ಅಚ್ಚುಮೆಚ್ಚಿನ ಆನೆಯಾಗಿರುವ ಅಭಿಮನ್ಯುವಿಗೆ ವಿಶೇಷ ಬೀಳ್ಕೊಡುಗೆ ನೀಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಗಜಪಯಣದ ವೇಳೆ ಅಭಿಮನ್ಯುವಿಗೆ ಗೌರವಪೂರ್ವಕ ಬೀಳ್ಕೊಡುಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

- Advertisement -spot_img

More articles

- Advertisement -spot_img

Latest article