No menu items!
30.6 C
Munich
Friday, August 28, 2026

ಸೈಬರ್ ಕ್ರೈಂ ತನಿಖೆಗೆ ತೆರಳಿದ್ದ ಬೆಂಗಳೂರು ಪೊಲೀಸ್ ಇನ್ಸ್ಪೆಕ್ಟರ್ ಅಪಘಾತದಲ್ಲಿ ಸಾವು; ಬಸ್ ಪ್ರಪಾತಕ್ಕೆ ಉರುಳಿ ದುರಂತ

Must read

ಸೈಬರ್ ಕ್ರೈಂ ತನಿಖೆಗೆ ತೆರಳಿದ್ದ ಬೆಂಗಳೂರು ಪೊಲೀಸ್ ಇನ್ಸ್ಪೆಕ್ಟರ್ ಅಪಘಾತದಲ್ಲಿ ಸಾವು; ಬಸ್ ಪ್ರಪಾತಕ್ಕೆ ಉರುಳಿ ದುರಂತ

ಬೆಂಗಳೂರು/ಭೋಪಾಲ್: ಸೈಬರ್ ಕ್ರೈಂ ಪ್ರಕರಣವೊಂದರ ತನಿಖೆಗಾಗಿ ಮಧ್ಯಪ್ರದೇಶಕ್ಕೆ ತೆರಳಿದ್ದ ಬೆಂಗಳೂರು ಪೊಲೀಸ್ ಇನ್ಸ್ಪೆಕ್ಟರ್ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಬೆಂಗಳೂರು ಆಗ್ನೇಯ ವಿಭಾಗದ ಸಿಇಎನ್ (ಸೈಬರ್ ಕ್ರೈಂ) ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇನ್ಸ್ಪೆಕ್ಟರ್ ರವಿ ಕೆ.ಬಿ. ಅವರು ಮೃತಪಟ್ಟಿದ್ದಾರೆ.
ಪೊಲೀಸ್ ತಂಡದೊಂದಿಗೆ ಮಧ್ಯಪ್ರದೇಶಕ್ಕೆ ತೆರಳಿದ್ದ ರವಿ ಕೆ.ಬಿ. ಅವರು ಭೋಪಾಲ್ನಿಂದ ಇಂದೋರ್ಗೆ ಬಸ್ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಬಸ್ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ ರವಿ ಸೇರಿದಂತೆ ನಾಲ್ವರು ಗಾಯಗೊಂಡಿದ್ದರು.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇನ್ಸ್ಪೆಕ್ಟರ್ ರವಿ ಕೆ.ಬಿ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಇಂದು ಬೆಳಗ್ಗೆ ಸುಮಾರು 7.30ರ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಪಿಎಸ್ಐ ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ.
ಇನ್ಸ್ಪೆಕ್ಟರ್ ರವಿ ಕೆ.ಬಿ. ಅವರು ಈ ಹಿಂದೆ ಬೆಂಗಳೂರಿನ ಅಶೋಕನಗರ, ಇಂದಿರಾನಗರ ಹಾಗೂ ಕೋರಮಂಗಲ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. 2007ನೇ ಬ್ಯಾಚ್ನ ಪೊಲೀಸ್ ಅಧಿಕಾರಿಯಾಗಿದ್ದ ಅವರು ಪೊಲೀಸ್ ಇಲಾಖೆಯಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.
ಸೈಬರ್ ಕ್ರೈಂ ಪ್ರಕರಣದ ತನಿಖೆಗಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿರುವುದು ಪೊಲೀಸ್ ಇಲಾಖೆಯಲ್ಲಿ ಆಘಾತ ಮೂಡಿಸಿದೆ.
ರವಿ ಕೆ.ಬಿ. ಅವರ ನಿಧನದ ಸುದ್ದಿ ತಿಳಿದು ಪೊಲೀಸ್ ಇಲಾಖೆ ಹಾಗೂ ಸಹೋದ್ಯೋಗಿಗಳಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.

- Advertisement -spot_img

More articles

- Advertisement -spot_img

Latest article