ನೋಟು ನಿಷೇಧ ಕ್ರಮವನ್ನು ಬೆಂಬಲಿಸಿ: ಮೋದಿ ನಡೆಯನ್ನು ಸಮರ್ಥಿಸಿದ ಅಮೀರ್ ಖಾನ್

Date:

ದೇಶದಲ್ಲಿ 500 ಮತ್ತು 1000 ಮುಖಬೆಲೆಯ ಹಳೆಯ ನೋಟುಗಳನ್ನು ಅಮಾನ್ಯಗೊಳಿದ ಮೋದಿ ನೇತೃತ್ವದ ಕೇಂದ್ರದ ನಿರ್ಧಾರವನ್ನು ಎಲ್ಲರೂ ಬೆಂಬಲಿಸಬೇಕು ಎಂದು ಖ್ಯಾತ ಬಾಲಿವುಡ್ ನಟ ಅಮೀರ್ ಖಾನ್ ಕರೆ ನೀಡಿದ್ದಾರೆ. ಕಪ್ಪು ಹಣ ವಿರುದ್ದ ಕೇಂದ್ರ ಕೈಗೊಂಡಿರುವ ನೋಟ್ ಬ್ಯಾನ್ ಸರ್ಜಿಕಲ್ ಸ್ಟ್ರೈಕ್‍ನ್ನು ಎಲ್ಲರೂ ಬೆಂಬಲಿಸಬೇಕು ಎಂದು ಕರೆ ನೀಡಿರುವ ಅಮೀರ್ ಖಾನ್ ಇದೇ ವೇಳೆ ಹಣದ ಸಮಸ್ಯೆಯಿಂದ ಜನ ಸಾಮಾನ್ಯರು ತೊಂದರೆ ಅನುಭವಿಸುತ್ತಿರುವುದಕ್ಕೆ ಬೇಸರ ವ್ಯಕ್ತ ಪಡಿಸಿದ್ದಾರೆ. ನಾನು ಕಾಲ ಕಾಲಕ್ಕೆ ತೆರಿಗೆ ಪಾವತಿಸುತ್ತೇನೆ ಇದರಿಂದ ನೋಟ್ ಬ್ಯಾನ್‍ನಿಂದ ನನ್ನ ಮೇಲೆ ಯಾವುದೇ ಪರಿಣಾಮ ಬೀರೋದಿಲ್ಲ. ಸರ್ಕಾರಕ್ಕೆ ಯಾರು ಟ್ಯಾಕ್ಸ್ ಕಟ್ಟದೇ ಇರುವ ಕಪ್ಪು ಕುಳಗಳಿಗೆ ಮಾತ್ರ ನೋಟ್ ಬ್ಯಾನ್ ಹೊಡೆತ ಬಿದ್ದಿದೆ. ನಾನು ಕಾರ್ಡ್ ಮೂಲಕ ವ್ಯವಹಾರ ನಡೆಸುತ್ತಿದ್ದೇನೆ ಎಂದು ಈ ವೇಳೆ ಹೇಳಿಕೊಂಡಿದ್ದಾರೆ. ದೇಶದಲ್ಲಿ ನೋಟ್ ಬ್ಯಾನ್ ಕ್ರಮದಿಂದ ಜನರ ಆರ್ಥಿಕ ಪರಿಸ್ಥಿತಿ ಸ್ವಲ್ಪ ಮಟ್ಟಿಗೆ ಹದಗೆಟ್ಟಿದೆ. ಇದರ ಬಗ್ಗೆ ನನಗೆ ಬೇಸರವಿದ್ದರೂ ಯಾರಾದರೂ ಒಂದೊಳ್ಳೆ ಕೆಲಸ ಮಾಡ್ತಾ ಇದ್ದಾರೆ ಅಂದರೆ ಅದಕ್ಕೆ ಬೆಂಬಲ ನೀಡಬೇಕು. ನೋಟು ನಿಷೇಧ ಕ್ರಮದಿಂದ ದೇಶದ ಜನತೆ ಈಗ ಕ್ಯಾಶ್‍ಲೆಸ್ ವ್ಯವಹಾರದ ಮೊರೆ ಹೋಗುತ್ತಿದ್ದು ಇದು ಡಿಜಿಟಲ್ ಇಂಡಿಯಾ ಕನಸಿನ ಮೊದಲ ಹೆಜ್ಜೆ ಎಂದಿದ್ದಾರೆ. ನಾನು ಅರ್ಥಶಾಸ್ತ್ರಜ್ಞನಲ್ಲ. ಯಾರಾದರೂ ಒಳ್ಳೆ ಕೆಲಸ ಮಾಡ್ತಾ ಇದಾರೆ ಅಂದ್ರೆ ಅದಕ್ಕೆ ಬೆಂಬಲ ನೀಡಬೇಕು ಸಿನಿಮಾ ರಂಗದಲ್ಲಿರೋ ನಾನು ಆರ್ಥ ಶಾಸ್ತ್ರದ ಬಗ್ಗೆ ಮಾತನಾಡುವುದು ಸೂಕ್ತವಲ್ಲ ಎಂದು ದಂಗಲ್ ಚಿತ್ರದ ನಾಯಕ ಅಮೀರ್ ಖಾನ್ ತಿಳಿಸಿದ್ದಾರೆ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಆರ್‍ಟಿಇ ಪ್ರವೇಶ: ಜನವರಿ 15ರಿಂದ ಅರ್ಜಿ ಸ್ವೀಕೃತಿ, ಆಧಾರ್ ಕಡ್ಡಾಯ

ಬಿಗ್‍ಬಾಸ್ ಮನೆಯಲ್ಲಿ ಸಖತ್ ವಾಕ್ಸಮರ..!

ದರ್ಶನ್‍ರನ್ನು ಬಿಗ್‍ಬಾಸ್ ವೇದಿಕೆಗೆ ಕರ್ದಿದೀರಾ ಎಂಬ ಅಭಿಮಾನಿಯ ಪ್ರಶ್ನೆಗೆ ಸುದೀಪ್ ಕೊಟ್ಟ ಉತ್ತರವೇನು..?

ಗುಡ್ ನ್ಯೂಸ್: ಚಿನ್ನದ ಬೆಲೆ 3000ರೂ ಇಳಿಕೆ..!

ನೀವು ಸ್ಮಾರ್ಟ್ ಫೋನ್ ಯೂಸ್ ಮಾಡ್ತೀರಾ..? ಹಾಗಾದ್ರೆ ಈ ಸ್ಟೋರಿ ಓದಿ..!

ಕುಡುಕರಿಗೆ ಶಾಕ್ ಕೊಟ್ಟ ಸುಪ್ರೀಂ: ದೇಶದ ಎಲ್ಲಾ ಹೆದ್ದಾರಿಗಳಲ್ಲಿನ ಬಾರ್, ವೈನ್ ಶಾಪ್ ಬಂದ್…!

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್...

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ ವಿಜಯಪುರ: ವಿಜಯಪುರ ನಗರದಲ್ಲಿ ಮತ್ತೊಮ್ಮೆ ಭೂಕಂಪನದ...

ಚಳಿಗಾಲದಲ್ಲಿ ಖರ್ಜೂರ ಸೇವಿಸುವುದರಿಂದ ಸಿಗುವ ಪ್ರಯೋಜನಗಳೇನು?

ಚಳಿಗಾಲದಲ್ಲಿ ಖರ್ಜೂರ ಸೇವಿಸುವುದರಿಂದ ಸಿಗುವ ಪ್ರಯೋಜನಗಳೇನು? ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಲು ಮತ್ತು ಶಕ್ತಿಯುತವಾಗಿರಿಸಲು...

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ ಬೆಳಗಾವಿ ಜಿಲ್ಲೆಯ ಖಾನಾಪುರ...