No menu items!
27.6 C
Munich
Tuesday, September 8, 2026

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ; ಪ್ರಜ್ವಲ್ ರೇವಣ್ಣಗೆ 2 ದಿನ ಪೊಲೀಸ್ ಕಸ್ಟಡಿ

Must read

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ; ಪ್ರಜ್ವಲ್ ರೇವಣ್ಣಗೆ 2 ದಿನ ಪೊಲೀಸ್ ಕಸ್ಟಡಿ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್ ಫೋನ್ ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪ್ರಜ್ವಲ್ ರೇವಣ್ಣ ಅವರನ್ನು 42ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಬಾಡಿ ವಾರೆಂಟ್ ಮೂಲಕ ಅವರನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲು ಪೊಲೀಸರು ನ್ಯಾಯಾಲಯದ ಅನುಮತಿ ಕೋರಿದರು.
ಪ್ರಕರಣದಲ್ಲಿ ಪ್ರತಾಪ್ ಎ1 ಆರೋಪಿಯಾಗಿದ್ದು, ಪ್ರಜ್ವಲ್ ರೇವಣ್ಣ ಎ2 ಆರೋಪಿಯಾಗಿದ್ದಾರೆ. ಪ್ರಕರಣದ ತನಿಖೆಗೆ ಅಗತ್ಯವಿರುವ ಹಿನ್ನೆಲೆಯಲ್ಲಿ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಹಾಗೂ ಪ್ರತಾಪ್ ಅವರನ್ನು ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲು ಅವಕಾಶ ನೀಡುವಂತೆ ಪೊಲೀಸರು ಮನವಿ ಮಾಡಿದ್ದರು.
ಪೊಲೀಸರ ಮನವಿಯನ್ನು ಪರಿಗಣಿಸಿದ 42ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರಾದ ಸಂದೀಪ್ ಪಾಟೀಲ್ ಅವರು ಪ್ರಜ್ವಲ್ ರೇವಣ್ಣ ಅವರಿಗೆ ಎರಡು ದಿನಗಳ ಪೊಲೀಸ್ ಕಸ್ಟಡಿ ನೀಡಿ ಆದೇಶಿಸಿದ್ದಾರೆ.
ನ್ಯಾಯಾಲಯದ ಆದೇಶದ ಅನ್ವಯ ಇಂದಿನಿಂದಲೇ ಪೊಲೀಸರು ಪ್ರಜ್ವಲ್ ರೇವಣ್ಣ ಅವರನ್ನು ತಮ್ಮ ವಶಕ್ಕೆ ಪಡೆದು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಿದ್ದಾರೆ. ಜೈಲಿನಲ್ಲಿ ಮೊಬೈಲ್ ಬಳಕೆಯಾದ ರೀತಿಯ ಬಗ್ಗೆ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಇತರ ಅಂಶಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಲಿದ್ದಾರೆ.

- Advertisement -spot_img

More articles

- Advertisement -spot_img

Latest article