No menu items!
10.2 C
Munich
Tuesday, September 15, 2026

ಬೆಳಗಾವಿಯಲ್ಲಿ ಭೀಕರ ಅಗ್ನಿ ಅವಘಡ: ಒಂದೇ ಕುಟುಂಬದ ನಾಲ್ವರು ಸಜೀವ ದಹನ

Must read

ಬೆಳಗಾವಿಯಲ್ಲಿ ಭೀಕರ ಅಗ್ನಿ ಅವಘಡ: ಒಂದೇ ಕುಟುಂಬದ ನಾಲ್ವರು ಸಜೀವ ದಹನ

ಬೆಳಗಾವಿ: ಗಣೇಶ ಹಬ್ಬದ ಸಂಭ್ರಮದಲ್ಲಿದ್ದ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ ದಾರುಣ ಘಟನೆ ನಡೆದಿದೆ. ನಗರದ ಚಾವ್ಹಾಟ್ ಗಲ್ಲಿಯಲ್ಲಿ ತಡರಾತ್ರಿ ಮನೆಯೊಂದರಲ್ಲಿ ಈ ಅವಘಡ ಸಂಭವಿಸಿದೆ.
ಮನೆಯಲ್ಲಿದ್ದ ವಿದ್ಯುತ್ ಸಂಪರ್ಕದಲ್ಲಿ ದೋಷ ಉಂಟಾಗಿ, ಫ್ರಿಜ್ ಸ್ಫೋಟಗೊಂಡ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಕ್ಷಣಾರ್ಧದಲ್ಲೇ ಬೆಂಕಿ ಇಡೀ ಮನೆಗೆ ವ್ಯಾಪಿಸಿದ್ದು, ಮನೆಯಲ್ಲಿದ್ದ ನಾಲ್ವರು ಬೆಂಕಿಗೆ ಸಿಲುಕಿ ಮೃತಪಟ್ಟಿದ್ದಾರೆ.
ಮೃತರನ್ನು ಗಜಾನನ ರಾಜಾರಾಮ ದಮೋನೆ (65), ರೋಷನ ಗಜಾನನ ದಮೋನೆ (21), ಶಾರದಾ (45) ಹಾಗೂ ಭಾರತಿ (50) ಎಂದು ಗುರುತಿಸಲಾಗಿದೆ.
ಇನ್ನು ಘಟನೆಯಲ್ಲಿ ಪ್ರಿಯಾ ಹಾಗೂ ಗಂಗಾ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಕುಟುಂಬದಲ್ಲಿ ಈ ದಾರುಣ ಘಟನೆ ನಡೆದಿದ್ದು, ಹಬ್ಬದ ಸಂಭ್ರಮದಲ್ಲಿದ್ದ ಬೆಳಗಾವಿಯಲ್ಲಿ ದುರಂತದ ಸುದ್ದಿ ಆಘಾತ ಮೂಡಿಸಿದೆ. ಕುಟುಂಬಸ್ಥರು ಹಾಗೂ ಸ್ಥಳೀಯರು ಘಟನೆಯಿಂದ ತೀವ್ರ ದುಃಖಕ್ಕೊಳಗಾಗಿದ್ದಾರೆ.
ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಗ್ನಿ ಅವಘಡಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.

- Advertisement -spot_img

More articles

- Advertisement -spot_img

Latest article