No menu items!
11.3 C
Munich
Sunday, September 20, 2026

ಬೆಂಗಳೂರು ನಿವಾಸಿಗಳಿಗೆ ಗುಡ್ ನ್ಯೂಸ್; ಇನ್ಮುಂದೆ 1-2 ತಿಂಗಳು ಕಾಯಬೇಕಿಲ್ಲ, ಜಸ್ಟ್ 15-30 ನಿಮಿಷದಲ್ಲೇ ಬಿಲ್ಡಿಂಗ್ ಪ್ಲಾನ್ ಅಪ್ರೂವಲ್!

Must read

ಬೆಂಗಳೂರು ನಿವಾಸಿಗಳಿಗೆ ಗುಡ್ ನ್ಯೂಸ್; ಇನ್ಮುಂದೆ 1-2 ತಿಂಗಳು ಕಾಯಬೇಕಿಲ್ಲ, ಜಸ್ಟ್ 15-30 ನಿಮಿಷದಲ್ಲೇ ಬಿಲ್ಡಿಂಗ್ ಪ್ಲಾನ್ ಅಪ್ರೂವಲ್!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳಲು ಮುಂದಾಗಿರುವವರಿಗೆ ರಾಜ್ಯ ಸರ್ಕಾರ ಮಹತ್ವದ ಸೌಲಭ್ಯವನ್ನು ಪರಿಚಯಿಸಿದೆ. ಬಿಲ್ಡಿಂಗ್ ಪ್ಲಾನ್ ಅನುಮೋದನೆಗಾಗಿ ಈ ಹಿಂದೆ ಒಂದರಿಂದ ಎರಡು ತಿಂಗಳವರೆಗೆ ಕಾಯಬೇಕಾಗಿದ್ದ ಪರಿಸ್ಥಿತಿಗೆ ಕಡಿವಾಣ ಹಾಕಲು ಸುಧಾರಿತ ‘ನಂಬಿಕೆ ನಕ್ಷೆ 2.0’ ತಂತ್ರಾಂಶಕ್ಕೆ ಚಾಲನೆ ನೀಡಲಾಗಿದೆ.
ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ವಿಕಾಸಸೌಧದಲ್ಲಿ ‘ನಂಬಿಕೆ ನಕ್ಷೆ 2.0’ ತಂತ್ರಾಂಶವನ್ನು ಅಧಿಕೃತವಾಗಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಬಿಲ್ಡಿಂಗ್ ಪ್ಲಾನ್ ಅನುಮೋದನೆ ಪ್ರಕ್ರಿಯೆಯನ್ನು ಮತ್ತಷ್ಟು ಸರಳ ಮತ್ತು ವೇಗಗೊಳಿಸುವ ಉದ್ದೇಶದಿಂದ ಈ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದರು.
ಈ ಹಿಂದೆ ಕಟ್ಟಡದ ನಕ್ಷೆ ಅನುಮೋದನೆ ಪಡೆಯಲು ಅಧಿಕಾರಿಗಳ ಸಹಿ, ದಾಖಲೆಗಳ ಪರಿಶೀಲನೆ ಸೇರಿದಂತೆ ವಿವಿಧ ಪ್ರಕ್ರಿಯೆಗಳಿಗೆ ಒಂದರಿಂದ ಎರಡು ತಿಂಗಳವರೆಗೆ ಸಮಯ ಬೇಕಾಗುತ್ತಿತ್ತು. ಇದರಿಂದ ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು. ಇದೀಗ ಈ ಪ್ರಕ್ರಿಯೆಯ ಅವಧಿಯನ್ನು 15ರಿಂದ 30 ನಿಮಿಷಗಳಿಗೆ ಇಳಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವರು ಹೇಳಿದರು.
ಹೊಸ ವ್ಯವಸ್ಥೆಯಲ್ಲಿ ಸಾರ್ವಜನಿಕರು ಬಿಬಿಎಂಪಿ ಅಥವಾ ಸರ್ಕಾರಿ ಕಚೇರಿಗಳಿಗೆ ಪದೇಪದೆ ಭೇಟಿ ನೀಡುವ ಅಗತ್ಯವಿಲ್ಲ. ಕಟ್ಟಡದ ನಕ್ಷೆಯನ್ನು KAD (CAD) ಫಾರ್ಮೆಟ್ನಲ್ಲಿ ಆನ್ಲೈನ್ ಮೂಲಕ ಅಪ್ಲೋಡ್ ಮಾಡಬೇಕು.
ನಂತರ ತಂತ್ರಾಂಶವೇ ಸಲ್ಲಿಸಿರುವ ಕಟ್ಟಡದ ನಕ್ಷೆಯನ್ನು ಪರಿಶೀಲಿಸಿ, ಅದು ಜಾರಿಯಲ್ಲಿರುವ ಕಟ್ಟಡ ನಿಯಮಾವಳಿಗಳಿಗೆ ಅನುಗುಣವಾಗಿದೆಯೇ ಎಂಬುದನ್ನು ಪರೀಕ್ಷಿಸುತ್ತದೆ. ಆಸ್ತಿ ದಾಖಲೆಗಳನ್ನೂ ವ್ಯವಸ್ಥೆಯ ಮೂಲಕ ಪರಿಶೀಲಿಸುವ ವ್ಯವಸ್ಥೆ ಕಲ್ಪಿಸಲಾಗಿದೆ.
ನಕ್ಷೆ ಮತ್ತು ಅಗತ್ಯ ದಾಖಲೆಗಳು ನಿಯಮಬದ್ಧವಾಗಿದ್ದರೆ, 15ರಿಂದ 30 ನಿಮಿಷಗಳ ಅವಧಿಯಲ್ಲೇ ಮನೆ ನಿರ್ಮಾಣಕ್ಕೆ ಕಾನೂನುಬದ್ಧ ಅನುಮೋದನೆ ಪಡೆಯಲು ಸಾಧ್ಯವಾಗಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಸದ್ಯಕ್ಕೆ 50×80 ಅಡಿ ಅಳತೆಯ ನಿವೇಶನಗಳಲ್ಲಿ ಗರಿಷ್ಠ ನಾಲ್ಕು ಘಟಕಗಳವರೆಗೆ ನಿರ್ಮಾಣ ಮಾಡುವ ಕಟ್ಟಡಗಳು ಹಾಗೂ 4,000 ಚದರ ಅಡಿವರೆಗಿನ ವಸತಿ ಕಟ್ಟಡಗಳಿಗೆ ಈ ಸರಳೀಕೃತ ವ್ಯವಸ್ಥೆ ಅನ್ವಯವಾಗಲಿದೆ.
ಪ್ರಾಯೋಗಿಕವಾಗಿ ಆಯ್ದ ಪ್ರದೇಶಗಳಲ್ಲಿ ಈ ವ್ಯವಸ್ಥೆ ಜಾರಿಗೆ ಬಂದಿದ್ದು, ಮುಂದಿನ ದಿನಗಳಲ್ಲಿ ದೊಡ್ಡ ಕಟ್ಟಡಗಳಿಗೂ ಇದೇ ರೀತಿಯ ಸರಳ ಹಾಗೂ ವೇಗದ ಅನುಮೋದನಾ ವ್ಯವಸ್ಥೆಯನ್ನು ವಿಸ್ತರಿಸುವ ಉದ್ದೇಶವಿದೆ ಎಂದು ಸಚಿವರು ತಿಳಿಸಿದ್ದಾರೆ.
ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕುವುದು, ಸಾರ್ವಜನಿಕರಿಗೆ ಕಚೇರಿಗಳಿಗೆ ಅಲೆದಾಡುವ ತೊಂದರೆ ತಪ್ಪಿಸುವುದು ಹಾಗೂ ಕಟ್ಟಡ ನಕ್ಷೆ ಅನುಮೋದನೆ ಪ್ರಕ್ರಿಯೆಯನ್ನು ತಂತ್ರಜ್ಞಾನ ಆಧಾರಿತವಾಗಿ ಸರಳಗೊಳಿಸುವುದು ‘ನಂಬಿಕೆ ನಕ್ಷೆ 2.0’ ವ್ಯವಸ್ಥೆಯ ಪ್ರಮುಖ ಉದ್ದೇಶವಾಗಿದೆ.

- Advertisement -spot_img

More articles

- Advertisement -spot_img

Latest article