No menu items!
9 C
Munich
Tuesday, September 22, 2026

ಸೌಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮರು ತನಿಖೆಗೆ ಸುಪ್ರೀಂ ಆದೇಶ, 3 ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಲು ಸೂಚನೆ

Must read

ಸೌಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮರು ತನಿಖೆಗೆ ಸುಪ್ರೀಂ ಆದೇಶ, 3 ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಲು ಸೂಚನೆ

ನವದೆಹಲಿ: ರಾಜ್ಯಾದ್ಯಂತ ತೀವ್ರ ಕುತೂಹಲ ಮತ್ತು ಸಂಚಲನ ಮೂಡಿಸಿದ್ದ ಧರ್ಮಸ್ಥಳದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಅತ್ಯಂತ ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಮರು ತನಿಖೆ ನಡೆಸುವಂತೆ ಆದೇಶಿಸಿರುವ ದೇಶದ ಅತ್ಯುನ್ನತ ನ್ಯಾಯಾಲಯ, ಹೊಸದಾಗಿ ವಿಶೇಷ ತನಿಖಾ ತಂಡವನ್ನು (SIT) ರಚಿಸಿ ಮುಂದಿನ ಮೂರು ತಿಂಗಳೊಳಗೆ ತನಿಖೆಯನ್ನು ಪೂರ್ಣಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಸೌಜನ್ಯ ತಾಯಿಯ ಸುದೀರ್ಘ ನ್ಯಾಯಹೋರಾಟ: ಈ ಹಿಂದೆ ಈ ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ (CBI) ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ಹಾಗೂ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಸೌಜನ್ಯ ಅವರ ತಾಯಿ ಕುಸುಮಾವತಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಮರು ತನಿಖೆಗೆ ಮನವಿ ಮಾಡಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಹೈಕೋರ್ಟ್ ಆದೇಶವನ್ನು ಸವಾಲು ಮಾಡಿ ಕುಸುಮಾವತಿ ಅವರು ಸುಪ್ರೀಂ ಕೋರ್ಟ್ಗೆ ವಿಶೇಷ ಮೇಲ್ಮನವಿ ಸಲ್ಲಿಸಿದ್ದರು.
ನ್ಯಾಯಮೂರ್ತಿ ಸಂಜಯ್ ಕುಮಾರ್ ಪೀಠದ ಆದೇಶ: ಸುಮಾರು ಒಂದು ತಿಂಗಳ ಹಿಂದೆ ಈ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರಿದ್ದ ಪೀಠವು ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ತೀರ್ಪು ಪ್ರಕಟಿಸಿರುವ ಸುಪ್ರೀಂ ಕೋರ್ಟ್, ಪ್ರಕರಣದಲ್ಲಿ ಮರು ತನಿಖೆ ಅಗತ್ಯ ಎಂದು ಸ್ಪಷ್ಟಪಡಿಸಿ ಮಹತ್ವದ ಆದೇಶ ಹೊರಡಿಸಿದೆ.
ಹಳೆಯ ಅಧಿಕಾರಿಗಳಿಗೆ ಇಲ್ಲ ಜಾಗ: ಮರು ತನಿಖೆಗೆ ಹೊಸ ಎಸ್ಐಟಿ (SIT) ರಚಿಸಲು ಸೂಚಿಸಿರುವ ಸುಪ್ರೀಂ ಕೋರ್ಟ್, ಈ ಹಿಂದೆ ಈ ಪ್ರಕರಣದ ತನಿಖೆ ನಡೆಸಿದ್ದ ಯಾವುದೇ ಅಧಿಕಾರಿಗಳನ್ನು ಹೊಸ ತನಿಖಾ ತಂಡದಲ್ಲಿ ಸೇರಿಸಬಾರದು ಎಂದು ಸ್ಪಷ್ಟವಾಗಿ ತಿಳಿಸಿದೆ. ಮೂರು ತಿಂಗಳ ಕಾಲಮಿತಿಯೊಳಗೆ ನಿಷ್ಪಕ್ಷಪಾತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಕೋರ್ಟ್ ನಿರ್ದೇಶನ ನೀಡಿದ್ದು, ಈ ಆದೇಶವು ಸೌಜನ್ಯ ಕುಟುಂಬಸ್ಥರು ಹಾಗೂ ಸಾರ್ವಜನಿಕರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

- Advertisement -spot_img

More articles

- Advertisement -spot_img

Latest article