No menu items!
9 C
Munich
Tuesday, September 22, 2026

ರಾಜ್ಯಾದ್ಯಂತ ಗುಡುಗು ಸಹಿತ ಮಳೆ ಆರ್ಭಟ: ಹವಾಮಾನ ಇಲಾಖೆ ಮುನ್ಸೂಚನೆ!

Must read

ರಾಜ್ಯಾದ್ಯಂತ ಗುಡುಗು ಸಹಿತ ಮಳೆ ಆರ್ಭಟ: ಹವಾಮಾನ ಇಲಾಖೆ ಮುನ್ಸೂಚನೆ!

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಸೆಪ್ಟೆಂಬರ್ 21 ಮತ್ತು 22ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದ್ದು, ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯೂ ಇದೆ.
ಸೆಪ್ಟೆಂಬರ್ 21ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ವೇಳೆ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳ ಹಲವು ಕಡೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಹಲವು ಕಡೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಇನ್ನು ಸೆಪ್ಟೆಂಬರ್ 22ರಂದು ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳಲ್ಲೂ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.
ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.
ಇದೇ ವೇಳೆ ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಹಲವು ಕಡೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾನುವಾರ ಸಂಜೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಬೆಂಗಳೂರು ಕೆಐಎಎಲ್ ವೀಕ್ಷಣಾಲಯದಲ್ಲಿ 9 ಮಿ.ಮೀ, ಬೆಂಗಳೂರು ಎಚ್ಎಎಲ್ ವಿಮಾನ ನಿಲ್ದಾಣ ವೀಕ್ಷಣಾಲಯದಲ್ಲಿ 7 ಮಿ.ಮೀ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ 7 ಮಿ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

- Advertisement -spot_img

More articles

- Advertisement -spot_img

Latest article