1009 ರನ್ ಬಾರಿಸಿ ವಿಶ್ವ ದಾಖಲೆ ಸೃಷ್ಠಿಸಿದ್ದ ಯುವ ಕ್ರಿಕೆಟಿಗ ಪ್ರಣವ್ ಧಾನೆವಾಡೆಯನ್ನು ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದ ಘಟನೆ ವರದಿಯಾಗಿದೆ..!
ಭಾನುವಾರ ಕಲ್ಯಾಣ ನಗರಕ್ಕೆ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ ಜಾವೇಡ್ಕರ್ ಆಗಮಿಸುತ್ತಿದ್ದ ಹಿನ್ನಲೆಯಲ್ಲಿ, ಕ್ರಿಕೆಟ್ ಮೈದಾನದಲ್ಲಿ ಹೆಲಿಕ್ಯಾಪ್ಟರ್ ಲ್ಯಾಂಡ್ ಮಾಡಲು ಸ್ಥಳ ನಿಗದಿ ಮಾಡಿದ್ದರು. ಇದೇ ವೇಳೆ ಮೈದಾನಕ್ಕೆ ಬಂದ ಪ್ರಣವ್ ತನ್ನ ಗೆಳೆಯರೊಂದಿಗೆ ಕ್ರಿಕೆಟ್ ಆಡಲು ಮುಂದಾಗಿದ್ದಾನೆ. ಆದರೆ ಅಲ್ಲಿ ನಿಯೋಜನೆಗೊಂಡಿದ್ದ ಪೊಲೀಸ್ ಒಬ್ಬರು ಕ್ರಿಕೆಟ್ ಆಡಲು ಅನುಮತಿ ನೀಡಲಿಲ್ಲ. ಅದಕ್ಕೆ ಖಾರವಾಗಿ ಪ್ರತಿಕ್ರಿಯೆ ನೀಡಿದ್ದ ಪ್ರಣವ್ ಮೈದಾನದಲ್ಲಿ ಕ್ರಿಕೆಟ್ ಆಡಬೇಡಿ ಎಂದು ಎಲ್ಲೂ ಬೋರ್ಡ್ ಹಾಕಿಲ್ವಲ್ಲಾ..? ನಾವು ಇಲ್ಲೇ ಆಡೋದು ಎಂದು ಮತ್ತೆ ಕ್ರಿಕೆಟ್ ಆಡಲು ಮುಂದಾಗಿದ್ದಾನೆ. ಇದೇ ವೇಳೆ ಪೊಲೀಸ್ ಹಾಗೂ ಪ್ರಣವ್ ನಡುವೆ ಮಾತಿನ ಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಬಜಾರ್‍ಪೇಟ್ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿ ಡಿಎಸ್ ಸೂರ್ಯವಂಶಿ ಆಗಮಿಸಿ ಪರಿಸ್ಥಿತಿ ನಿಭಾಯಿಸಲು ಪ್ರಯತ್ನ ಪಟ್ಟರೂ ಪ್ರಣವ್ ಅವರ ಮಾತಿಗೂ ಬೆಲೆಕೊಡಲಿಲ್ಲ. ಈ ಹಿನ್ನಲೆಯಲ್ಲಿ ಪ್ರಣವ್ ಮತ್ತು ಆತನ ಗೆಳೆಯರನ್ನು ಬಜಾರ್ ಪೇಟ್ ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದ್ದಾರೆ.
ಕೆಲವು ತಿಂಗಳ ಹಿಂದೆ ಪ್ರಣವ್ ಕೆ.ಸಿ ಗಾಂಧಿ ಪ್ರೌಢ ಶಾಲೆಯನ್ನು ಪ್ರತಿನಿಧಿಸಿ ಆರ್ಯ ಗುರುಕುಲ್ ತಂಡದ ವಿರುದ್ದ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ಕೇವಲ 323 ಎಸೆತಗಳನ್ನು ಎದುರಿಸಿ 59 ಸಿಕ್ಸರ್ 129 ಬೌಂಡರಿಗಳ ನೆರವಿನಿಂದ 1009ರನ್ ಗಳಿಸುವ ಮೂಲಕ ಇಷ್ಟೊಂದು ದೊಡ್ಡ ಮೊತ್ತದ ರನ್ ಬಾಸಿದ ಮೊದಲ ಆಟಗಾರ ಎಂಬ ಖ್ಯಾತಿಗೆ ಭಾಜನರಾಗಿದ್ದ. ಈತನ ಸಾಧನೆಗೆ ಮೆಚ್ಚಿ ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಈತನಿಗೆ ಐದು ವರ್ಷಗಳ ಕಾಲ ಸ್ಕಾಲರ್‍ಶಿಪ್ ನೀಡಲು ನಿರ್ಧರಿಸಿತ್ತು.
Like us on Facebook The New India Times
ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333
POPULAR STORIES :
ಕೆಲವೇ ದಿನಗಳಲ್ಲಿ ಬೆಂಗಳೂರಲ್ಲೂ ಸಂಚರಿಸಲಿದೆ ಸಬ್ ಅರ್ಬನ್ ರೈಲು..!
ನಿಮ್ಮ ಖಾತೆಯಲ್ಲಿ 2 ಲಕ್ಷ ರೂ. ಜಮಾ ಆಗಿದ್ಯಾ..? ಹಾಗಾದ್ರೆ ನಿಮ್ಗೆ ಕಾದಿದೆ ಗಂಡಾಂತರ..!
ಆರ್‍ಟಿಇ ಪ್ರವೇಶ: ಜನವರಿ 15ರಿಂದ ಅರ್ಜಿ ಸ್ವೀಕೃತಿ, ಆಧಾರ್ ಕಡ್ಡಾಯ
ಬಿಗ್‍ಬಾಸ್ ಮನೆಯಲ್ಲಿ ಸಖತ್ ವಾಕ್ಸಮರ..!
ದರ್ಶನ್‍ರನ್ನು ಬಿಗ್‍ಬಾಸ್ ವೇದಿಕೆಗೆ ಕರ್ದಿದೀರಾ ಎಂಬ ಅಭಿಮಾನಿಯ ಪ್ರಶ್ನೆಗೆ ಸುದೀಪ್ ಕೊಟ್ಟ ಉತ್ತರವೇನು..?
ಗುಡ್ ನ್ಯೂಸ್: ಚಿನ್ನದ ಬೆಲೆ 3000ರೂ ಇಳಿಕೆ..!
ನೀವು ಸ್ಮಾರ್ಟ್ ಫೋನ್ ಯೂಸ್ ಮಾಡ್ತೀರಾ..? ಹಾಗಾದ್ರೆ ಈ ಸ್ಟೋರಿ ಓದಿ..!
ಕುಡುಕರಿಗೆ ಶಾಕ್ ಕೊಟ್ಟ ಸುಪ್ರೀಂ: ದೇಶದ ಎಲ್ಲಾ ಹೆದ್ದಾರಿಗಳಲ್ಲಿನ ಬಾರ್, ವೈನ್ ಶಾಪ್ ಬಂದ್…!