No menu items!
9.4 C
Munich
Saturday, September 26, 2026

ಹಾಸನಾಂಬೆ ದರ್ಶನೋತ್ಸವ 2026 ದಿನಾಂಕ ಪ್ರಕಟ: ಅಕ್ಟೋಬರ್ 29ರಂದು ಗರ್ಭಗುಡಿ ಬಾಗಿಲು ಓಪನ್

Must read

ಹಾಸನಾಂಬೆ ದರ್ಶನೋತ್ಸವ 2026 ದಿನಾಂಕ ಪ್ರಕಟ: ಅಕ್ಟೋಬರ್ 29ರಂದು ಗರ್ಭಗುಡಿ ಬಾಗಿಲು ಓಪನ್

ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಪ್ರಸಿದ್ಧ ಹಾಸನದ ಅಧಿದೇವತೆ ಶ್ರೀ ಹಾಸನಾಂಬೆಯ 2026ರ ದರ್ಶನೋತ್ಸವಕ್ಕೆ ಜಿಲ್ಲಾಡಳಿತ ಭರಪೂರ ಸಿದ್ಧತೆಗಳನ್ನು ಆರಂಭಿಸಿದೆ.

ಬರುವ ಅಕ್ಟೋಬರ್ 29, 2026 ರಂದು ಹಾಸನಾಂಬೆ ದೇವಾಲಯದ ಗರ್ಭಗುಡಿಯ ಬಾಗಿಲು ತೆರೆಯಲಿದ್ದು, ನವೆಂಬರ್ 11 ರವರೆಗೆ ದೇಗುಲದ ಬಾಗಿಲು ತೆರೆದಿರುತ್ತದೆ. ಮೊದಲ ಹಾಗೂ ಕೊನೆಯ ದಿನ ಹೊರತುಪಡಿಸಿ, ಅಕ್ಟೋಬರ್ 30 ರಿಂದ ನವೆಂಬರ್ 10 ರವರೆಗೆ ಒಟ್ಟು 12 ದಿನಗಳ ಕಾಲ ಸಾರ್ವಜನಿಕ ಭಕ್ತರಿಗೆ ಹಾಸನಾಂಬೆಯ ದರ್ಶನಕ್ಕೆ ಮುಕ್ತ ಅವಕಾಶ ಕಲ್ಪಿಸಲಾಗಿದೆ.

ಕಳೆದ ವರ್ಷ ಬರೋಬ್ಬರಿ 23 ಲಕ್ಷಕ್ಕೂ ಹೆಚ್ಚು ಭಕ್ತರು ಹಾಸನಾಂಬೆಯ ದರ್ಶನ ಪಡೆದಿದ್ದರು. ಈ ಬಾರಿಯೂ ಅಪಾರ ಸಂಖ್ಯೆಯ ಭಕ್ತರು ಆಗಮಿಸುವ ನಿರೀಕ್ಷೆಯಿರುವುದರಿಂದ, ಸುಗಮ ದರ್ಶನಕ್ಕೆ ಸೂಕ್ತ ಬ್ಯಾರಿಕೇಡ್ ವ್ಯವಸ್ಥೆ, ಪ್ರಸಾದ ವಿತರಣೆ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಲಾಗಿದೆ.

ಇದೇ ಸೆಪ್ಟೆಂಬರ್ 26 ರಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಅಧಿಕೃತ ಸಿದ್ಧತಾ ಸಭೆ ನಡೆಯಲಿದ್ದು, ಈ ವೇಳೆ 2026ರ ಹಾಸನಾಂಬೆ ಜಾತ್ರಾ ಮಹೋತ್ಸವದ ಅಧಿಕೃತ ಪೋಸ್ಟರ್ ಹಾಗೂ ವೆಬ್‌ಸೈಟ್‌ಗೆ ಚಾಲನೆ ನೀಡಲಾಗುವುದು.

- Advertisement -spot_img

More articles

- Advertisement -spot_img

Latest article