No menu items!
16.5 C
Munich
Saturday, October 3, 2026

ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ; ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು!

Must read

ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ; ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು!

ಹಾಸನ: ಹಿಟ್ ಅಂಡ್ ರನ್ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಯುವಕನ ಅಂಗಾಂಗ ದಾನ ಮಾಡುವ ಮೂಲಕ ಪೋಷಕರು ಸಮಾಜಕ್ಕೆ ದೊಡ್ಡ ಮಾದರಿಯಾಗಿದ್ದಾರೆ.
ಹೊಳೆನರಸೀಪುರ ತಾಲೂಕಿನ ಚಾಕೇನಹಳ್ಳಿ ಕಟ್ಟೆ ಗ್ರಾಮದ ನಿವಾಸಿ ರವಿ (31) ಮೃತಪಟ್ಟ ಯುವಕರಾಗಿದ್ದಾರೆ.
ಸುಮಾರು ಮೂರು ತಿಂಗಳ ಹಿಂದೆ ಪಾರಸನಹಳ್ಳಿ ಗ್ರಾಮದ ಬಳಿ ಸಂಭವಿಸಿದ್ದ ಹಿಟ್ ಅಂಡ್ ರನ್ ರಸ್ತೆ ಅಪಘಾತದಲ್ಲಿ ರವಿ ತೀವ್ರವಾಗಿ ಗಾಯಗೊಂಡಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಅವರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಬೆಂಗಳೂರಿನ ಆಸ್ಪತ್ರೆಯಲ್ಲಿ ಸುದೀರ್ಘ ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ರವಿ ಅವರು ಅಕ್ಟೋಬರ್ 3 ರಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮಗನನ್ನು ಕಳೆದುಕೊಂಡ ತೀವ್ರ ನೋವಿನ ನಡುವೆಯೂ, ಅವರ ಪೋಷಕರು ಉದಾತ್ತ ಮನಸ್ಸು ಮಾಡಿ ರವಿ ಅವರ ಅಂಗಾಂಗಗಳನ್ನು ದಾನ ಮಾಡಲು ನಿರ್ಧರಿಸಿದ್ದಾರೆ.
ಮಗನ ಅಗಲಿಕೆಯ ದುಃಖದಲ್ಲೂ ಮತ್ತೊಬ್ಬರ ಬಾಳಿಗೆ ಬೆಳಕಾಗುವಂತಹ ನಿರ್ಧಾರ ತಳೆದು ಪೋಷಕರು ಮಾನವೀಯತೆ ಮೆರೆದಿದ್ದಾರೆ.

- Advertisement -spot_img

More articles

- Advertisement -spot_img

Latest article