No menu items!
9.1 C
Munich
Wednesday, October 7, 2026

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ; ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಬಿ.ವಿ. ಗೀತಾ ED ವಶಕ್ಕೆ

Must read

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ; ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಬಿ.ವಿ. ಗೀತಾ ED ವಶಕ್ಕೆ

ಬೆಂಗಳೂರು: ಕೆಪಿಎಸ್ಸಿ ಮೂಲಕ ನಡೆದ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ತನಿಖೆ ಚುರುಕುಗೊಳಿಸಿದೆ. KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಇಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಶಿವಶಂಕರಪ್ಪ ಸಾಹುಕಾರ್ ಅವರ ನಿವಾಸದ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮನೆಯಲ್ಲಿದ್ದ ಶಿವಶಂಕರಪ್ಪ ಸಾಹುಕಾರ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಬಳಿಕ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ KPSC ಸದಸ್ಯೆ ಬಿ.ವಿ. ಗೀತಾ ಅವರ ವಿರುದ್ಧವೂ ಇ.ಡಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.
ಬೆಂಗಳೂರಿನಲ್ಲಿರುವ ಬಿ.ವಿ. ಗೀತಾ ಅವರ ನಿವಾಸದಲ್ಲಿ ಪರಿಶೀಲನೆ ನಡೆಸಿದ ಅಧಿಕಾರಿಗಳು, ಬಳಿಕ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
KPSC ಮೂಲಕ ನಡೆದ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದ ಹಣಕಾಸು ವ್ಯವಹಾರಗಳು ಹಾಗೂ ನೇಮಕಾತಿ ಪ್ರಕ್ರಿಯೆಯ ವಿವಿಧ ಆಯಾಮಗಳ ಕುರಿತು ಇ.ಡಿ ಪರಿಶೀಲನೆ ನಡೆಸುತ್ತಿದೆ ಎನ್ನಲಾಗಿದೆ.
ಶಿವಶಂಕರಪ್ಪ ಸಾಹುಕಾರ್ ಹಾಗೂ ಬಿ.ವಿ. ಗೀತಾ ಅವರನ್ನು ವಶಕ್ಕೆ ಪಡೆದಿರುವ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ಮತ್ತಷ್ಟು ಮಹತ್ವ ಪಡೆದುಕೊಂಡಿದೆ. ಆದರೆ ಇಬ್ಬರ ವಿರುದ್ಧದ ಆರೋಪಗಳು ತನಿಖೆಯ ಹಂತದಲ್ಲಿದ್ದು, ನ್ಯಾಯಾಂಗ ಪ್ರಕ್ರಿಯೆಯಲ್ಲಿ ಸಾಬೀತಾಗಬೇಕಿದೆ.

- Advertisement -spot_img

More articles

- Advertisement -spot_img

Latest article