No menu items!
13.4 C
Munich
Thursday, October 8, 2026

ದರ್ಶನ್ ಗೆ ಸುಪ್ರೀಂ ಕೋರ್ಟ್ನಲ್ಲೂ ಹಿನ್ನಡೆ! ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿ ವಜಾ

Must read

ದರ್ಶನ್ ಗೆ ಸುಪ್ರೀಂ ಕೋರ್ಟ್ನಲ್ಲೂ ಹಿನ್ನಡೆ! ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿ ವಜಾ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ಗೆ ಮತ್ತೊಂದು ಕಾನೂನು ಹಿನ್ನಡೆಯಾಗಿದೆ. ಪ್ರಕರಣದ 14ನೇ ಆರೋಪಿಯಾಗಿದ್ದ ಪ್ರದೋಷ್ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿರುವುದನ್ನು ಪ್ರಶ್ನಿಸಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಪ್ರದೋಷ್ಗೆ ಮಾಫಿ ಸಾಕ್ಷಿ ಸ್ಥಾನಮಾನ ನೀಡುವಾಗ ಕಾನೂನು ನಿಯಮಗಳನ್ನು ಸರಿಯಾಗಿ ಪಾಲಿಸಿಲ್ಲ. ಸಹ-ಆರೋಪಿಗಳ ಗಮನಕ್ಕೆ ತರದೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವಿಜಯಲಕ್ಷ್ಮಿ ಪರ ವಾದ ಮಂಡಿಸಲಾಗಿತ್ತು.
ಆದರೆ, ಈ ಹಿಂದೆ ಕರ್ನಾಟಕ ಹೈಕೋರ್ಟ್ ಅರ್ಜಿಯನ್ನು ತಿರಸ್ಕರಿಸಿತ್ತು. ಹೀಗಾಗಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ವಿಶೇಷ ಮೇಲ್ಮನವಿ ಸಲ್ಲಿಸಲಾಗಿತ್ತು.
ಇದೀಗ ಸುಪ್ರೀಂ ಕೋರ್ಟ್ ಕೂಡ ಕೆಳ ನ್ಯಾಯಾಲಯಗಳ ನಿರ್ಧಾರದಲ್ಲಿ ಹಸ್ತಕ್ಷೇಪ ಮಾಡಲು ಕಾರಣವಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾಗೊಳಿಸಿದೆ ಎಂದು ವರದಿಯಾಗಿದೆ.
ಇದರೊಂದಿಗೆ ಪ್ರದೋಷ್ ಮಾಫಿ ಸಾಕ್ಷಿ ಸ್ಥಾನಮಾನ ಪ್ರಶ್ನಿಸಿದ್ದ ವಿಜಯಲಕ್ಷ್ಮಿ ಅವರ ಕಾನೂನು ಹೋರಾಟಕ್ಕೆ ಮತ್ತೊಂದು ಹಿನ್ನಡೆಯಾಗಿದೆ.
ಇನ್ನು ಪ್ರದೋಷ್ ಈಗಾಗಲೇ ವಿಚಾರಣಾ ನ್ಯಾಯಾಲಯದ ಮುಂದೆ ಹೇಳಿಕೆ ನೀಡುವ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ಮುಂದಿನ ವಿಚಾರಣೆಯಲ್ಲಿ ಆತನ ಸಾಕ್ಷ್ಯ ಮಹತ್ವ ಪಡೆದುಕೊಂಡಿದೆ.

- Advertisement -spot_img

More articles

- Advertisement -spot_img

Latest article