No menu items!
10.1 C
Munich
Sunday, October 11, 2026

ರೇಣುಕಾಸ್ವಾಮಿ ಕೇಸ್ ಗೆ ಬಿಗ್ ಟ್ವಿಸ್ಟ್: ಎಸಿಪಿ ಚಂದನ್, PSI ವಿನಯ್ ವಿರುದ್ಧ ಇಲಾಖಾ ತನಿಖೆ ಸೂಚನೆ

Must read

ರೇಣುಕಾಸ್ವಾಮಿ ಕೇಸ್ ಗೆ ಬಿಗ್ ಟ್ವಿಸ್ಟ್: ಎಸಿಪಿ ಚಂದನ್, PSI ವಿನಯ್ ವಿರುದ್ಧ ಇಲಾಖಾ ತನಿಖೆ ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗಿ ನೀಡಿರುವ ಹೇಳಿಕೆಯ ಬೆನ್ನಲ್ಲೇ, ಪಿಎಸ್ಐ ವಿನಯ್ ಅವರ ವಿರುದ್ಧವೂ ಆರೋಪಗಳು ಕೇಳಿಬಂದಿದ್ದು, ಅವರಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.
ಪ್ರಕರಣದ ತನಿಖೆಯಲ್ಲಿ ಲೋಪಗಳಾಗಿವೆ ಹಾಗೂ ಕೆಲವು ಸಾಕ್ಷಿಗಳನ್ನು ಸೃಷ್ಟಿಸಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಅಲ್ಲದೆ, ಪ್ರಕರಣದಲ್ಲಿ ಪಿಎಸ್ಐ ವಿನಯ್ ಅವರ ಪಾತ್ರವಿದ್ದರೂ ಅವರನ್ನು ಆರೋಪಿಗಳ ಪಟ್ಟಿಯಿಂದ ಹೊರಗಿಡಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.
ಪಿಎಸ್ಐ ವಿನಯ್ ಅವರ ಸೂಚನೆಯ ಮೇರೆಗೆ ರೇಣುಕಾಸ್ವಾಮಿ ಅವರ ಮೃತದೇಹವನ್ನು ಆರೋಪಿಗಳು ಎಸೆದಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯಲ್ಲಿನ ಲೋಪಗಳು ಹಾಗೂ ಪೊಲೀಸ್ ಅಧಿಕಾರಿಗಳ ಪಾತ್ರದ ಕುರಿತು ಪ್ರಶ್ನೆಗಳು ಎದ್ದಿವೆ.
ಈ ಸಂಬಂಧ ದೂರುದಾರ ಸ್ನೇಹಮಯಿ ಕೃಷ್ಣ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕ ಮತ್ತು ಪೊಲೀಸ್ ಮಹಾನಿರೀಕ್ಷಕ (ಡಿಜಿ ಮತ್ತು ಐಜಿ) ಡಾ. ಎಂ. ಸಲೀಂ ಅವರಿಗೆ ದೂರು ಸಲ್ಲಿಸಿದ್ದರು. ದೂರಿನಲ್ಲಿ ಪ್ರಕರಣದ ತನಿಖೆಯಲ್ಲಿನ ಲೋಪಗಳನ್ನು ಪ್ರಶ್ನಿಸಿ, ಸಂಬಂಧಪಟ್ಟ ಅಧಿಕಾರಿಗಳ ಪಾತ್ರದ ಕುರಿತು ತನಿಖೆ ನಡೆಸುವಂತೆ ಮನವಿ ಮಾಡಿದ್ದರು.
ದೂರಿನ ಹಿನ್ನೆಲೆಯಲ್ಲಿ ತನಿಖಾಧಿಕಾರಿ ಎಸಿಪಿ ಚಂದನ್ ಹಾಗೂ ಪಿಎಸ್ಐ ವಿನಯ್ ವಿರುದ್ಧ ಇಲಾಖಾ ತನಿಖೆ ನಡೆಸಲು ಸೂಚಿಸಲಾಗಿದೆ. ಜಂಟಿ ಪೊಲೀಸ್ ಆಯುಕ್ತ ವಂಶಿ ಕೃಷ್ಣ ಅವರ ನೇತೃತ್ವದಲ್ಲಿ ಇಲಾಖಾ ತನಿಖೆ ನಡೆಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.
ಒಟ್ಟಾರೆ, ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯಲ್ಲಿ ಲೋಪಗಳಾಗಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳ ವಿರುದ್ಧವೇ ತನಿಖೆಗೆ ಸೂಚನೆ ನೀಡಿರುವುದು ಪ್ರಕರಣಕ್ಕೆ ಮತ್ತಷ್ಟು ಮಹತ್ವ ತಂದಿದೆ. ಇಲಾಖಾ ತನಿಖೆಯಲ್ಲಿ ಯಾವ ಅಂಶಗಳು ಬಹಿರಂಗವಾಗಲಿವೆ ಎಂಬುದನ್ನು ಕಾದುನೋಡಬೇಕಿದೆ.

- Advertisement -spot_img

More articles

- Advertisement -spot_img

Latest article