ಬಳ್ಳಾರಿ ರಸ್ತೆಯಲ್ಲಿ ನಾಲ್ಕು ಪಥದ ಎಲಿವೇಟೆಡ್ ಕಾರಿಡಾರ್ ಕಾಮಗಾರಿ ಆರಂಭ: 18 ತಿಂಗಳು ಸಂಚಾರ ನಿರ್ಬಂಧ

Must read

ಬಳ್ಳಾರಿ ರಸ್ತೆಯಲ್ಲಿ ನಾಲ್ಕು ಪಥದ ಎಲಿವೇಟೆಡ್ ಕಾರಿಡಾರ್ ಕಾಮಗಾರಿ ಆರಂಭ: 18 ತಿಂಗಳು ಸಂಚಾರ ನಿರ್ಬಂಧ

ಬೆಂಗಳೂರು: ಬೆಂಗಳೂರಿನಿಂದ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬಳ್ಳಾರಿ ರಸ್ತೆಯಲ್ಲಿ ಬಹುನಿರೀಕ್ಷಿತ ನಾಲ್ಕು ಪಥದ ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಕಾಮಗಾರಿ ಆರಂಭವಾಗಿದೆ.

ಹೆಬ್ಬಾಳ ಮತ್ತು ಮೆಖ್ರಿ ಸರ್ಕಲ್ ನಡುವಿನ ಯುಎಎಸ್ ಸ್ಟಾಫ್ ಕ್ವಾರ್ಟರ್ಸ್‌ನಿಂದ ಮೆಖ್ರಿ ಸರ್ಕಲ್‌ವರೆಗೆ ಬಿಡಿಎ ವತಿಯಿಂದ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ನವೆಂಬರ್ 6ರಿಂದ ಕಾಮಗಾರಿ ಆರಂಭವಾಗಿದ್ದು, ಮುಂದಿನ 18 ತಿಂಗಳ ಕಾಲ ನಡೆಯಲಿದೆ ಎಂದು ತಿಳಿಸಲಾಗಿದೆ.

ಕಾಮಗಾರಿಯ ಹಿನ್ನೆಲೆಯಲ್ಲಿ ಬಳ್ಳಾರಿ ರಸ್ತೆಯ ಸರ್ವೀಸ್ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಯಿದೆ. ಅಲ್ಲದೆ, ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಖಾಸಗಿ ಬಸ್‌ಗಳು ಹಾಗೂ ಎಲ್ಲಾ ರೀತಿಯ ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಕಾರು, ದ್ವಿಚಕ್ರ ವಾಹನ ಮತ್ತು ಆಟೋರಿಕ್ಷಾಗಳಂತಹ ಲಘು ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ಈ ಹಿನ್ನೆಲೆಯಲ್ಲಿ ಸಂಚಾರ ಪೊಲೀಸರು ವಾಹನ ಸವಾರರಿಗೆ ಪರ್ಯಾಯ ಮಾರ್ಗಗಳನ್ನು ಸೂಚಿಸಿದ್ದಾರೆ. ವಿಮಾನ ನಿಲ್ದಾಣದಿಂದ ನಗರದ ಕಡೆಗೆ ಬರುವ ವಾಹನಗಳು ಹಾಗೂ ಯಶವಂತಪುರದಿಂದ ವಿಮಾನ ನಿಲ್ದಾಣಕ್ಕೆ ತೆರಳುವ ವಾಹನಗಳು ಸೂಚಿಸಿರುವ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಮನವಿ ಮಾಡಿದ್ದಾರೆ.

ಮುಂದಿನ 18 ತಿಂಗಳ ಕಾಲ ಈ ಮಾರ್ಗದಲ್ಲಿ ಸಂಚಾರ ಬದಲಾವಣೆ ಇರುವುದರಿಂದ ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವಂತೆ ಸಂಚಾರ ಪೊಲೀಸರು ಸೂಚಿಸಿದ್ದಾರೆ.

- Advertisement -spot_img

More articles

- Advertisement -spot_img

Latest article