ನಾಳೆ ಕರ್ನಾಟಕಕ್ಕೆ ಪ್ರಧಾನಿ ಮೋದಿ ಭೇಟಿ; ಬೆಂಗಳೂರು-ಮೈಸೂರಿನಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿ!

Must read

ನಾಳೆ ಕರ್ನಾಟಕಕ್ಕೆ ಪ್ರಧಾನಿ ಮೋದಿ ಭೇಟಿ; ಬೆಂಗಳೂರು-ಮೈಸೂರಿನಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿ!

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 13ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಬೆಂಗಳೂರು ಹಾಗೂ ಮೈಸೂರು ನಗರಗಳಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರಧಾನಿ ಭೇಟಿಗೆ ಸಿದ್ಧತೆಗಳು ನಡೆಯುತ್ತಿವೆ.
ಪ್ರಧಾನಿ ಮೋದಿ ಅವರು ಬೆಳಗ್ಗೆ 10:05ಕ್ಕೆ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಬೆಳಗ್ಗೆ 10:45ಕ್ಕೆ ಪ್ರಶಾಂತಿ ಕುಟೀರಂನ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ನಂತರ ಮಧ್ಯಾಹ್ನ 12:40ಕ್ಕೆ ತಾವರೆಕೆರೆ ಮೆಟ್ರೋ ನಿಲ್ದಾಣಕ್ಕೆ ಭೇಟಿ ನೀಡಲಿದ್ದು, 1:15ಕ್ಕೆ ಐಐಎಂಬಿ ಆಡಿಟೋರಿಯಂನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ ಬಳಿಕ, 2:30ಕ್ಕೆ ಹೆಲಿಕಾಪ್ಟರ್ ಮೂಲಕ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ಸಂಜೆ 6 ಗಂಟೆಗೆ ಮೈಸೂರಿನಿಂದ ದೆಹಲಿಗೆ ವಾಪಸ್ ಆಗಲಿದ್ದಾರೆ.
ಪಿಂಕ್ ಲೈನ್ ಮೆಟ್ರೋ ನಿಲ್ದಾಣಗಳ ಹೆಸರು ಬದಲಾವಣೆ
ಇನ್ನೊಂದೆಡೆ, ನಮ್ಮ ಮೆಟ್ರೋ ಪಿಂಕ್ ಲೈನ್ನ ಮೂರು ನಿಲ್ದಾಣಗಳ ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಸಂಬಂಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಮನವಿಗೆ ಕೇಂದ್ರದಿಂದ ಒಪ್ಪಿಗೆ ಸಿಕ್ಕಿದೆ.
ಇನ್ನು ಮುಂದೆ ಐಐಎಂಬಿ ಮೆಟ್ರೋ ನಿಲ್ದಾಣವನ್ನು ‘ಬಿಳೇಕಹಳ್ಳಿ ಐಐಎಂಬಿ ನಿಲ್ದಾಣ’ ಎಂದು, ಜೆ.ಪಿ.ನಗರ 4ನೇ ಹಂತದ ನಿಲ್ದಾಣವನ್ನು ‘ಎನ್.ಎಸ್.ಪಾಳ್ಯ ಜೆ.ಪಿ.ನಗರ 4ನೇ ಹಂತ’ ಎಂದು ಹಾಗೂ ತಾವರೆಕೆರೆ ಮೆಟ್ರೋ ನಿಲ್ದಾಣವನ್ನು ‘ಎಸ್.ಜಿ.ಪಾಳ್ಯ’ ಎಂದು ಕರೆಯಲಾಗುತ್ತದೆ.
ಸ್ಥಳೀಯರ ಬೇಡಿಕೆ ಹಾಗೂ ಸಮಿತಿಯ ಶಿಫಾರಸಿನ ಮೇರೆಗೆ ಈ ಹೆಸರು ಬದಲಾವಣೆ ಮಾಡಲಾಗಿದೆ. ಪ್ರಧಾನಿ ಮೋದಿ ಅವರ ಕರ್ನಾಟಕ ಭೇಟಿಯ ದಿನವೇ ಮೆಟ್ರೋ ನಿಲ್ದಾಣಗಳ ಹೆಸರು ಬದಲಾವಣೆಯ ವಿಚಾರವೂ ಗಮನ ಸೆಳೆದಿದೆ.

- Advertisement -spot_img

More articles

- Advertisement -spot_img

Latest article