ಮಾಜಿ ಸಚಿವ ಡಿ.ಸಿ. ತಮ್ಮಣ್ಣ ಪತ್ನಿ ಪ್ರಮೀಳಾ ನಿಧನ; ನಾಳೆ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ

Must read

ಮಾಜಿ ಸಚಿವ ಡಿ.ಸಿ. ತಮ್ಮಣ್ಣ ಪತ್ನಿ ಪ್ರಮೀಳಾ ನಿಧನ; ನಾಳೆ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ

 

ಮಂಡ್ಯ: ಮಾಜಿ ಸಚಿವ ಡಿ.ಸಿ. ತಮ್ಮಣ್ಣ ಅವರ ಪತ್ನಿ ಪ್ರಮೀಳಾ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಗುರುವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಇಂದು (ನವೆಂಬರ್ 20) ಬೆಳಗ್ಗೆ ಬೆಂಗಳೂರಿನ ವಿಜಯನಗರದಲ್ಲಿರುವ ಅವರ ನಿವಾಸದಲ್ಲಿ ಪ್ರಮೀಳಾ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರು ಹಾಗೂ ಆಪ್ತರ ಅಂತಿಮ ದರ್ಶನಕ್ಕಾಗಿ ಇರಿಸಲಾಗಿದೆ.

ಇಂದು ಸಂಜೆ 4 ಗಂಟೆಗೆ ಪಾರ್ಥಿವ ಶರೀರವನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ದೊಡ್ಡರಸಿನಕೆರೆ ಗ್ರಾಮಕ್ಕೆ ತರಲಾಗುತ್ತದೆ. ಶನಿವಾರ ಬೆಳಗ್ಗೆ 11 ಗಂಟೆಯವರೆಗೆ ಗ್ರಾಮಸ್ಥರು, ಅಭಿಮಾನಿಗಳು ಹಾಗೂ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಬಳಿಕ ಕುಟುಂಬದ ಸಂಪ್ರದಾಯದಂತೆ ಸ್ವಗ್ರಾಮ ದೊಡ್ಡರಸಿನಕೆರೆಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಪ್ರಮೀಳಾ ಅವರು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಬೀಗರ ಕುಟುಂಬಕ್ಕೆ ಸೇರಿದವರಾಗಿದ್ದು, ಅವರ ನಿಧನಕ್ಕೆ ಜೆಡಿಎಸ್ ನಾಯಕರು, ಗಣ್ಯರು ಹಾಗೂ ಕುಟುಂಬಸ್ಥರು ಸಂತಾಪ ಸೂಚಿಸಿದ್ದಾರೆ.

- Advertisement -spot_img

More articles

- Advertisement -spot_img

Latest article