ಭಾಗವತ ಪ್ರವಚನ ಸಂಪನ್ನ ಹಿನ್ನೆಲೆ: ಶ್ರೀ ಪರಿಮಳ ತೀರ್ಥ ಪುಷ್ಕರಣಿಯಲ್ಲಿ ಅದ್ಧೂರಿ ತೆಪ್ಪೋತ್ಸವ

ಶ್ರೀಮಠದ ಗುರುರಾಜಾಂಗಣದಲ್ಲಿ ಶ್ರೀ ಸ್ವಾಮಿ ಗೋವಿಂದ ದೇವ್ ಗಿರಿ ಜೀ ಮಹಾರಾಜ್ ಅವರಿಂದ ನಡೆದ ಭಾಗವತ ಕಥಾ ಪ್ರವಚನ ಯಶಸ್ವಿಯಾಗಿ ಸಂಪನ್ನಗೊಂಡ ಹಿನ್ನೆಲೆಯಲ್ಲಿ ಇಂದು ಶ್ರೀ ಪರಿಮಳ ತೀರ್ಥ ಪುಷ್ಕರಣಿಯಲ್ಲಿ ಅದ್ಧೂರಿಯಾಗಿ ತೆಪ್ಪೋತ್ಸವ ನೆರವೇರಿತು.

ಈ ಸಂದರ್ಭದಲ್ಲಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದರು, ವ್ಯಾಸರಾಜ ಮಠದ ಉತ್ತರಾಧಿಕಾರಿಗಳಾದ ಶ್ರೀ ವಿದ್ಯಾವಿಜಯ ತೀರ್ಥರು ಹಾಗೂ ಶ್ರೀ ಸ್ವಾಮಿ ಗೋವಿಂದ ದೇವ್ ಗಿರಿ ಜೀ ಮಹಾರಾಜ್ ಅವರು ಭಕ್ತರಿಗೆ ಅನುಗ್ರಹ ಸಂದೇಶ ನೀಡಿದರು.

ಅಯೋಧ್ಯೆ ಸೇರಿದಂತೆ ಉತ್ತರ ಭಾರತದ ವಿವಿಧ ಭಾಗಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ತೆಪ್ಪೋತ್ಸವದಲ್ಲಿ ಪಾಲ್ಗೊಂಡರು. ಹರಿಗುರುಗಳ ಆಶೀರ್ವಾದ ಪಡೆದು ಪುನೀತರಾದರು.




