ಪ್ರತಾಪ್ ಸಿಂಹ ಹೇಳಿಕೆಗೆ ಕೊಡಗಿನಲ್ಲಿ ಆಕ್ಷೇಪ; ಮಲಯಾಳಿ ಸಮಾಜದಿಂದ ಕಾನೂನು ಕ್ರಮಕ್ಕೆ ಆಗ್ರಹ

Must read

ಪ್ರತಾಪ್ ಸಿಂಹ ಹೇಳಿಕೆಗೆ ಕೊಡಗಿನಲ್ಲಿ ಆಕ್ಷೇಪ; ಮಲಯಾಳಿ ಸಮಾಜದಿಂದ ಕಾನೂನು ಕ್ರಮಕ್ಕೆ ಆಗ್ರಹ

 

ಮಡಿಕೇರಿ: ಕೇರಳದ ಜನರು ಹಾಗೂ ಮಲಯಾಳಿ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದೂರು ದಾಖಲಾಗಿದೆ.

ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಪ್ರತಾಪ್ ಸಿಂಹ ಅವರು ಮಲಯಾಳಿ ಸಮುದಾಯದ ಭಾವನೆಗಳಿಗೆ ಧಕ್ಕೆ ತರುವಂತಹ ನಿಂದನಾತ್ಮಕ ಹಾಗೂ ದ್ವೇಷಭಾವನೆ ಮೂಡಿಸುವ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಕೊಡಗಿನ ಗೋಣಿಕೊಪ್ಪದಲ್ಲಿರುವ ಕೊಡಗು ಹಿಂದೂ ಮಲಯಾಳಿ ಸಮಾಜದ ವತಿಯಿಂದ ಇಂದು ದೂರು ಸಲ್ಲಿಸಲಾಗಿದೆ.

ಮಲಯಾಳಿ ಸಮುದಾಯದ ಗೌರವ ಮತ್ತು ಸ್ವಾಭಿಮಾನಕ್ಕೆ ಧಕ್ಕೆ ತರುವಂತಹ ಹೇಳಿಕೆಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಮಾಜದ ಮುಖಂಡರು ದೂರಿನಲ್ಲಿ ಒತ್ತಾಯಿಸಿದ್ದಾರೆ.

- Advertisement -spot_img

More articles

- Advertisement -spot_img

Latest article